Leviticus 6:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ವೇದಿಕೆಯ ಮೇಲೆ ಬೆಂಕಿ ಉರಿಯುತ್ತಲೇ ಇರಬೇಕು. ಅದನ್ನು ಆರಿ ಹೋಗುವುದಕ್ಕೆ ಬಿಡಬಾರದು, ಯಾಜಕನು ಪ್ರತಿ ಮುಂಜಾನೆ ವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಸಿದ್ಧಪಡಿಸಿ, ಸಮಾಧಾನಯಜ್ಞದ ಕೊಬ್ಬನ್ನು ಸುಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಜ್ಞವೇದಿಯ ಮೇಲಣ ಬೆಂಕಿ ಸರ್ವಾಂಗಹೋಮದ್ರವ್ಯದಿಂದ ಉರಿಯುತ್ತಲೇ ಇರಬೇಕು; ಅದು ಆರಿಹೋಗಬಾರದು. ಪ್ರತಿದಿನವೂ ಹೊತ್ತಾರೆಯಲ್ಲಿ ಯಾಜಕನು ಕಟ್ಟಿಗೆಯನ್ನು ತಂದುಹಾಕಿ, ಬೆಂಕಿ ಉರಿಸಿ, ಅದರ ಮೇಲೆ ಹೋಮದ್ರವ್ಯವನ್ನು ಕ್ರಮಪಡಿಸಿ, ಸಮಾಧಾನಯಜ್ಞಪಶುಗಳ ಕೊಬ್ಬನ್ನು ಅದರ ಮೇಲೆ ಹೋಮಮಾಡಬೇಕು.
Kannada BSI Bible 2016
ಯಜ್ಞವೇದಿಯ ಮೇಲಿನ ಬೆಂಕಿಯು ಅದರೊಳಗೆ ಸುಡುತ್ತಿರಬೇಕು; ಅದು ಉರಿಯುತ್ತಲೇ ಇರಬೇಕು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆ ಯನ್ನು ಸುಡಬೇಕು ಮತ್ತು ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು; ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಯಜ್ಞಗಳ ಕೊಬ್ಬನ್ನು ಸುಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಜ್ಞವೇದಿಯ ಮೇಲಣ ಬೆಂಕಿ ಸರ್ವಾಂಗಹೋಮದ್ರವ್ಯದಿಂದ ಉರಿಯುತ್ತಲೇ ಇರಬೇಕು; ಅದು ಆರಿಹೋಗಬಾರದು. ಪ್ರತಿದಿನವೂ ಹೊತ್ತಾರೆಯಲ್ಲಿ ಯಾಜಕನು ಕಟ್ಟಿಗೆಯನ್ನು ತಂದುಹಾಕಿ ಬೆಂಕಿ ಉರಿಸಿ ಅದರ ಮೇಲೆ ಹೋಮದ್ರವ್ಯವನ್ನು ಕ್ರಮಪಡಿಸಿ ಸಮಾಧಾನಯಜ್ಞಪಶುಗಳ ಕೊಬ್ಬನ್ನು ಅದರ ಮೇಲೆ ಹೋಮಮಾಡಬೇಕು.
Kannada Bible (KNCL) BSI 2016
ಬಲಿಪೀಠದ ಮೇಲಿನ ಬೆಂಕಿ ದಹನಬಲಿ ದ್ರವ್ಯದಿಂದ ಉರಿಯುತ್ತಲೇ ಇರಬೇಕು. ಅದು ಆರಿಹೋಗಬಾರದು. ಪ್ರತೀ ದಿನ ಬೆಳಿಗ್ಗೆ ಯಾಜಕನು ಕಟ್ಟಿಗೆಯನ್ನು ತಂದುಹಾಕಿ ಉರಿಸಿ, ಅದರ ಮೇಲೆ ದಹನ ದ್ರವ್ಯವನ್ನು ಕ್ರಮಪಡಿಸಿ, ಶಾಂತಿಸಮಾಧಾನ ಬಲಿಪ್ರಾಣಿಗಳ ಕೊಬ್ಬನ್ನು ಅದರ ಮೇಲೆ ಹೋಮಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಲಿಪೀಠದ ಮೇಲೆ ಬೆಂಕಿಯು ಅದರೊಳಗೆ ಸುಡುತ್ತಲೇ ಇರಬೇಕು. ಅದು ಆರಿಹೋಗಿರಬಾರದು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆಯನ್ನು ಹಾಕಬೇಕು. ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು. ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಬಲಿ ಅರ್ಪಣೆಗಳ ಕೊಬ್ಬನ್ನು ಸುಡಬೇಕು.