Leviticus 6:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹುಳಿ ಕಲಸಿ ರೊಟ್ಟಿ ಸುಡಬಾರದು. ನನಗೆ ಅಗ್ನಿಯ ಮೂಲಕ ಹೋಮವಾಗಿ ಅರ್ಪಿಸಿದ ಸಮರ್ಪಣೆಗಳಲ್ಲಿ ನಾನು ಅದನ್ನು ಯಾಜಕರ ಪಾಲನ್ನಾಗಿ ಕೊಟ್ಟಿದ್ದೇನೆ. ಅದು ಪಾಪಪರಿಹಾರಕ ಯಜ್ಞದಂತೆಯೂ ದೋಷಪರಿಹಾರಕ ಯಜ್ಞದಂತೆಯೂ ಮಹಾ ಪವಿತ್ರವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಹುಳಿಹಿಟ್ಟು ಸೇರಿಸಿ ಸುಡಬಾರದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಮತ್ತು ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪರಿಶುದ್ಧವಾದದ್ದು.
Kannada BSI Bible 2016
ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ. ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಹುಳಿಕಲಸಿ ಸುಡಕೂಡದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪರಿಶುದ್ಧವಾದದ್ದು.
Kannada Bible (KNCL) BSI 2016
ಸರ್ವೇಶ್ವರನಿಗೆ ಹೋಮ ರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಡಲಾಗಿದೆ. ಅದಕ್ಕೆ ಹುಳಿ ಕಲಸಿ ಸುಡಕೂಡದು. ದೋಷಪರಿಹಾರಕ ಬಲಿಯಂತೆ ಹಾಗು ಪ್ರಾಯಶ್ಚಿತ್ತ ಬಲಿದ್ರವ್ಯದಂತೆ ಅದು ಸಹ ಮಹಾಪರಿಶುದ್ಧವಾದುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ಅವರು ನನಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆಗಳಲ್ಲಿ ಅವರ ಪಾಲನ್ನು ಅವರಿಗೆ ನಾನು ಕೊಟ್ಟಿದ್ದೇನೆ. ಅದು ದೋಷಪರಿಹಾರದ ಬಲಿಯ ಹಾಗೆಯೂ ಮಹಾಪರಿಶುದ್ಧವಾದದ್ದು.