Leviticus 6:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶ್ರೇಷ್ಠವಾದ ಗೋಧಿಹಿಟ್ಟಿಗೆ ಎಣ್ಣೆಯನ್ನು ಬೆರೆಸಿ ಕಬ್ಬಿಣದ ಹಂಚಿನ ಮೇಲೆ ರೊಟ್ಟಿ ಸುಡಬೇಕು. ಅದನ್ನು ಬೇಯಿಸಿದ ಮೇಲೆ ನೀವು ಅದನ್ನು ಒಳಗೆ ತರಬೇಕು. ನೀವು ಈ ಸಮರ್ಪಣೆಯನ್ನು ತುಂಡುತುಂಡಾಗಿ ಮುರಿದು ಸಮರ್ಪಿಸಬೇಕು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನಸಿದ್ದಾಗಿರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.
Kannada BSI Bible 2016
ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು; ಅದು ಬೇಯಿಸಲ್ಪಟ್ಟಾಗ ನೀನು ಅದನ್ನು ಒಳಗೆ ತರಬೇಕು; ಬೇಯಿಸಲ್ಪಟ್ಟ ಆಹಾರ ಬಲಿಯ ತುಂಡುಗಳನ್ನು ನೀನು ಕರ್ತನಿಗೆ ಸುವಾಸನೆಗಾಗಿ ಸಮರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಅದನ್ನು ಭಾಗ ಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.
Kannada Bible (KNCL) BSI 2016
ಕಬ್ಬಿಣದ ಹೆಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಸರ್ವೇಶ್ವರನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಬೇಯಿಸಿದ ಧಾನ್ಯ ಸಮರ್ಪಣೆಯ ತುಂಡುಗಳನ್ನು ನೀನು ಯೆಹೋವ ದೇವರಿಗೆ ಸುವಾಸನೆಯಾಗಿ ಸಮರ್ಪಿಸಬೇಕು.