Leviticus 6:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆರೋನನ ಸ್ಥಾನವನ್ನು ಹೊಂದುವುದಕ್ಕಾಗಿ ಆರೋನನ ಸಂತತಿಯವರಲ್ಲಿ ಆರಿಸಲ್ಪಟ್ಟು ಅಭಿಷೇಕಿಸಲ್ಪಟ್ಟ ಯಾಜಕನು ಯೆಹೋವನಿಗೆ ಈ ಧಾನ್ಯಸಮರ್ಪಣೆಯನ್ನು ಮಾಡಬೇಕು. ಈ ನಿಯಮ ಶಾಶ್ವತವಾದದ್ದು. ಧಾನ್ಯಸಮರ್ಪಣೆಯು ಸಂಪೂರ್ಣವಾಗಿ ಹೋಮವಾಗಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತನಾದ ಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ಯೆಹೋವನಿಗೆ ಸಂಪೂರ್ಣವಾಗಿ ಹೋಮಮಾಡಬೇಕು.
Kannada BSI Bible 2016
ಅವನ ಕುಮಾರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು; ಇದು ಕರ್ತನಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ; ಅದು ಸಂಪೂರ್ಣವಾಗಿ ಸುಡಲ್ಪಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ನಿಶ್ಶೇಷವಾಗಿ ಹೋಮಮಾಡಿಬಿಡಬೇಕು.
Kannada Bible (KNCL) BSI 2016
ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತ ಯಾಜಕಪಟ್ಟಕ್ಕೆ ಬರುತ್ತಾನೋ ಅವನೇ ಅದನ್ನು ಸಮರ್ಪಿಸಬೇಕು. ಇದು ಶಾಶ್ವತ ನಿಯಮ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಪುತ್ರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು. ಇದು ಯೆಹೋವ ದೇವರಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ. ಅದು ಸಂಪೂರ್ಣವಾಗಿ ಸುಟ್ಟಿರಬೇಕು.