Leviticus 6:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆರೋನನಿಗೆ ಮತ್ತು ಅವನ ಪುತ್ರರಿಗೆ ಹೀಗೆ ಹೇಳು: ಪಾಪಪರಿಹಾರಕ ಯಜ್ಞದ ಕಟ್ಟಳೆ ಇದಾಗಿದೆ. ಸರ್ವಾಂಗಹೋಮ ಪಶುವು ವಧಿಸಲ್ಪಡುವ ಸ್ಥಳದಲ್ಲಿಯೇ ಪಾಪಪರಿಹಾರಕ ಯಜ್ಞಪಶುವು ಯೆಹೋವನ ಸನ್ನಿಧಿಯಲ್ಲಿ ವಧಿಸಲ್ಪಡಬೇಕು. ಅದು ಮಹಾ ಪವಿತ್ರವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಹೀಗೆ ಆಜ್ಞಾಪಿಸು, ‘ದೋಷಪರಿಹಾರಕ ಯಜ್ಞದ ನಿಯಮಗಳು: ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.
Kannada BSI Bible 2016
ಆರೋನನಿಗೂ ಅವನ ಕುಮಾರರಿಗೂ ಹೇಳಬೇಕಾ ದದ್ದೇನಂದರೆ, ಪಾಪದ ಬಲಿಯ ನಿಯಮವು ಇದೇ. ದಹನಬಲಿಯು ವಧಿಸಲ್ಪಡುವ ಸ್ಥಳದಲ್ಲಿ ಪಾಪದ ಬಲಿಯೂ ಕರ್ತನ ಸನ್ನಿಧಿಯಲ್ಲಿ ವಧಿಸಲ್ಪಡ ಬೇಕು; ಅದು ಅತಿ ಪರಿಶುದ್ಧವಾದದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಆರೋನನಿಗೂ ಅವನ ವಂಶದವರಿಗೂ ಹೀಗೆ ಆಜ್ಞಾಪಿಸು - ದೋಷಪರಿಹಾರಕ ಯಜ್ಞನಿಯಮಗಳು. ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನೂ ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು.
Kannada Bible (KNCL) BSI 2016
“ನೀನು ಆರೋನನಿಗೂ ಅವನ ವಂಶಜರಿಗೂ ದೋಷಪರಿಹಾರಕ ಬಲಿ ನಿಯಮಗಳ ಬಗ್ಗೆ ಹೀಗೆ ಆಜ್ಞಾಪಿಸು: ದಹನ ಬಲಿಪ್ರಾಣಿಯನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಬಲಿಪ್ರಾಣಿಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ವಧಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆರೋನನಿಗೂ, ಅವನ ಪುತ್ರರಿಗೂ ಹೇಳು: ‘ಪಾಪ ಪರಿಹಾರದ ಬಲಿಯ ನಿಯಮವು ಇದೇ. ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಪಾಪ ಪರಿಹಾರದ ಬಲಿಯೂ ಯೆಹೋವ ದೇವರ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.