Leviticus 6:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪಾಪಪರಿಹಾರಕ ಯಜ್ಞವನ್ನು ಅರ್ಪಿಸುವ ಯಾಜಕನು ಅದನ್ನು ಪವಿತ್ರಸ್ಥಳದಲ್ಲಿ ಅಂದರೆ ದೇವದರ್ಶನಗುಡಾರದ ಸುತ್ತಲಿರುವ ಅಂಗಳದಲ್ಲಿ ತಿನ್ನಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು.
Kannada BSI Bible 2016
ಪಾಪಕ್ಕಾಗಿ ಸಮರ್ಪಣೆ ಮಾಡುವ ಯಾಜಕನು ಅದನ್ನು ತಿನ್ನಬೇಕು; ಅದನ್ನು ಸಭೆಯ ಗುಡಾರ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಮಹಾಪರಿಶುದ್ಧವಾದದ್ದರಿಂದ ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು.
Kannada Bible (KNCL) BSI 2016
ಅದು ಮಹಾಪರಿಶುದ್ಧವಾದ್ದರಿಂದ ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಅದನ್ನು ಪವಿತ್ರ ಸ್ಥಳದೊಳಗೆ, ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಊಟಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಾಪ ಪರಿಹಾರದ ಬಲಿಯನ್ನು ಮಾಡುವ ಯಾಜಕನು ಅದನ್ನು ತಿನ್ನಬೇಕು. ಅದನ್ನು ಸಭೆಯ ದೇವದರ್ಶನದ ಗುಡಾರದ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.