Leviticus 6:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪಾಪಪರಿಹಾರಕ ಯಜ್ಞದ ಮಾಂಸವು ತಗಲಿದ ವಸ್ತುವೂ ಪವಿತ್ರವಾಗುತ್ತದೆ; ಮುಟ್ಟುವ ವ್ಯಕ್ತಿಯೂ ಪವಿತ್ರವಾಗುವನು. “ಚಿಮಿಕಿಸಲ್ಪಟ್ಟ ರಕ್ತದಲ್ಲಿ ಸ್ವಲ್ಪ ರಕ್ತವು ಯಾರ ಬಟ್ಟೆಯ ಮೇಲಾದರೂ ಬಿದ್ದರೆ, ನೀವು ಆ ಬಟ್ಟೆಗಳನ್ನು ಪವಿತ್ರಸ್ಥಳದಲ್ಲಿ ತೊಳೆಯಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು.
Kannada BSI Bible 2016
ಯಾವನಾದರೂ ಅದರ ಮಾಂಸವನ್ನು ಮುಟ್ಟಿದರೆ ಅದು ಪರಿಶುದ್ಧವಾಗುವದು; ಯಾವದಾ ದರೂ ಉಡುಪಿನ ಮೇಲೆ ಅದರ ರಕ್ತವು ಚಿಮುಕಿಸ ಲ್ಪಟ್ಟಾಗ ನೀನು ಅದನ್ನು ಚಿಮುಕಿಸದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲಾ ಪರಿಶುದ್ಧವಾಗುವದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು.
Kannada Bible (KNCL) BSI 2016
ಆ ಪ್ರಾಣಿಯ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು, ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರ ಸ್ಥಳದಲ್ಲೇ ಒಗೆದುಕೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಮಾಂಸವನ್ನು ಮುಟ್ಟಿದ್ದೆಲ್ಲವೂ ಪರಿಶುದ್ಧವಾಗಿರುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಉಡುಪಿನ ಮೇಲೆ ಬಿದ್ದರೆ, ಅದನ್ನು ಚಿಮುಕಿಸಿದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು.