Leviticus 6:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮತ್ತೊಬ್ಬನು ಕಳೆದುಕೊಂಡದ್ದನ್ನು ಕಂಡುಕೊಂಡು ಅದರ ಬಗ್ಗೆ ಸುಳ್ಳು ಹೇಳುವುದರಿಂದಾಗಲಿ ಮಾಡಿದ ಪ್ರಮಾಣವನ್ನು ಉಲ್ಲಂಘಿಸುವುದರಿಂದಾಗಲಿ ಪಾಪಮಾಡಿ ಯೆಹೋವನಿಗೆ ದ್ರೋಹಮಾಡಿದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತೊಬ್ಬನು ಕಳೆದುಕೊಂಡದ್ದನ್ನು ತಾನು ಕಂಡು ಸುಳ್ಳಾಣೆಯಿಟ್ಟದ್ದರಿಂದ, ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿದರೆ ಯೆಹೋವನಿಗೆ ದ್ರೋಹಿಯಾಗಿ ದೋಷಕ್ಕೆ ಒಳಗಾಗುವನು.
Kannada BSI Bible 2016
ಕಳೆದುಹೋಗಿದ್ದು ಸಿಕ್ಕಿ ಅದರ ವಿಷಯದಲ್ಲಿ ಸುಳ್ಳಾ ಡಿದರೆ ಮತ್ತು ಸುಳ್ಳಾಗಿ ಪ್ರಮಾಣಮಾಡಿದರೆ ಇವೆಲ್ಲವುಗಳಲ್ಲಿ ಯಾವದನ್ನಾದರೂ ಒಬ್ಬ ಮನುಷ್ಯನು ಮಾಡಿದ್ದರೆ ಅವುಗಳಲ್ಲಿ ಪಾಪಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೊಬ್ಬನು ಕಳಕೊಂಡದ್ದನ್ನು ತಾನು ಕಂಡು ಬೊಂಕಿ ಸುಳ್ಳಾಣೆಯಿಟ್ಟದ್ದರಿಂದಲೋ ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿ ಯೆಹೋವನಿಗೆ ದ್ರೋಹಿಯಾಗಿ ದೋಷಕ್ಕೆ ಒಳಗಾದರೆ
Kannada Bible (KNCL) BSI 2016
ಮತ್ತೊಬ್ಬನು ಕಳೆದುಕೊಂಡದ್ದನ್ನು ತಾವು ಕಂಡು ಬೊಂಕಿಯೋ, ಸುಳ್ಳಾಣೆಯಿಟ್ಟೋ ಅವುಗಳನ್ನು ಹಿಂದಿರುಗಿಸದೆ ತಮ್ಮಲ್ಲೇ ಇಟ್ಟುಕೊಂಡರೆ, ಇಂಥ ವಿಷಯಗಳಲ್ಲಿ ಪಾಪಮಾಡಿ, ಸರ್ವೇಶ್ವರನಿಗೆ ದ್ರೋಹಿಗಳಾಗಿ ದೋಷಕ್ಕೆ ಒಳಗಾಗುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಲ್ಲವೆ ಕಳೆದುಹೋಗಿದ ವಸ್ತು ಸಿಕ್ಕಿ, ಅದರ ವಿಷಯದಲ್ಲಿ ಸುಳ್ಳಾಡಿದ್ದರೆ ಮತ್ತು ಸುಳ್ಳಾಗಿ ಪ್ರಮಾಣ ಮಾಡಿದ್ದರೆ, ಇವೆಲ್ಲವುಗಳಲ್ಲಿ ಯಾವುದನ್ನಾದರೂ ಒಬ್ಬನು ಮಾಡಿದ್ದರೆ, ಅವನು ಪಾಪಮಾಡುವವನಾಗಿದ್ದಾನೆ.