Leviticus 6:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಪಾಪಪರಿಹಾರಕ ಯಜ್ಞದ ರಕ್ತವನ್ನು ದೇವದರ್ಶನಗುಡಾರದೊಳಗೆ ತೆಗೆದುಕೊಂಡು ಹೋಗಿ, ಜನರನ್ನು ಶುದ್ಧಿಗೊಳಿಸಲು ಪವಿತ್ರಸ್ಥಳದಲ್ಲಿ ಉಪಯೋಗಿಸಿದರೆ, ಆ ಪಾಪಪರಿಹಾರಕ ಯಜ್ಞವನ್ನು ಅಗ್ನಿಯಲ್ಲಿ ಸುಟ್ಟುಬಿಡಬೇಕು. ಯಾಜಕರು ಅದರ ಮಾಂಸವನ್ನು ತಿನ್ನಲೇಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವನ್ನು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ, ಪವಿತ್ರ ಸ್ಥಾನದೊಳಗೆ ತಂದಿರುವರೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು.
Kannada BSI Bible 2016
ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದಿರಬೇಕೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು.
Kannada Bible (KNCL) BSI 2016
ಆದರೆ ದೋಷಪರಿಹಾರಕ ಬಲಿಪ್ರಾಣಿಗಳಲ್ಲಿ ಯಾವ ಪ್ರಾಣಿಯ ರಕ್ತವು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ ತರಲಾಗಿದೆಯೋ ಅದರ ಮಾಂಸವನ್ನು ತಿನ್ನಲೇಬಾರದು; ಅದನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವ ಪಾಪ ಪರಿಹಾರದ ಬಲಿಯ ರಕ್ತವನ್ನು ದೇವದರ್ಶನದ ಗುಡಾರದೊಳಗೆ ಸಮಾಧಾನಕ್ಕಾಗಿ ತರಲಾಗಿದೆಯೋ, ಆ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು, ಅದನ್ನು ಬೆಂಕಿಯಿಂದ ಸುಡಬೇಕು.