Leviticus 7:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಧಾನ್ಯಸಮರ್ಪಣೆಗಳು ಆರೋನನ ಪುತ್ರರಿಗೆ ಸೇರುವವು. ಅದು ಒಣಗಿದ್ದರೂ ಎಣ್ಣೆಯಿಂದ ಬೆರೆತಿದ್ದರೂ ಅವರಿಗೆ ಸೇರುವವು. ಯಾಜಕರಾದ ಆರೋನನ ಪುತ್ರರೆಲ್ಲರೂ ಈ ಆಹಾರವನ್ನು ಹಂಚಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಎಣ್ಣೆ ಹೊಯ್ದ ಹಿಟ್ಟನ್ನಾಗಲಿ ಅಥವಾ ಬರೀ ಹಿಟ್ಟನ್ನಾಗಲಿ ಯಾರಾದರೂ ನೈವೇದ್ಯಕ್ಕಾಗಿ ತಂದಾಗ ಅದನ್ನು ಆರೋನನ ವಂಶದವರೆಲ್ಲರೂ ಸಮಾನವಾಗಿ ಅನುಭವಿಸಬೇಕು.
Kannada BSI Bible 2016
ಎಣ್ಣೆಯಿಂದ ಮಿಶ್ರಿತ ವಾದ ಮತ್ತು ಒಣಗಿದ ಪ್ರತಿಯೊಂದು ಆಹಾರ ಬಲಿಯನ್ನು ಆರೋನನ ಕುಮಾರರು ಸರಿಸಮವಾಗಿ ತೆಗೆದುಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಎಣ್ಣೆ ಹೊಯಿದ ಹಿಟ್ಟನ್ನಾಗಲಿ ಬರೀ ಹಿಟ್ಟನ್ನಾಗಲಿ ಯಾರಾದರೂ ನೈವೇದ್ಯಕ್ಕಾಗಿ ತಂದಾಗ ಅದನ್ನು ಆರೋನನ ವಂಶದವರೆಲ್ಲರೂ ಸಮವಾಗಿ ಅನುಭವಿಸಬೇಕು.
Kannada Bible (KNCL) BSI 2016
ಆದರೆ ಎಣ್ಣೆ ಹೊಯ್ದ ಹಿಟ್ಟನ್ನಾಗಲಿ, ಬರಿ ಹಿಟ್ಟನ್ನಾಗಲಿ ಯಾರಾದರು ನೈವೇದ್ಯಕ್ಕಾಗಿ ತಂದಾಗ ಅದನ್ನು ಆರೋನನ ವಂಶದವರೆಲ್ಲರು ಸಮವಾಗಿ ಅನುಭವಿಸತಕ್ಕದ್ದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಣ್ಣೆಯಿಂದ ಮಿಶ್ರಿತವಾದ ಮತ್ತು ಒಣಗಿದ್ದ ಪ್ರತಿಯೊಂದು ಧಾನ್ಯ ಸಮರ್ಪಣೆಯನ್ನೂ ಆರೋನನ ಪುತ್ರರು ಸರಿ ಸಮಾನವಾಗಿ ತೆಗೆದುಕೊಳ್ಳಬೇಕು.