Leviticus 7:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮರ್ಪಿಸಲ್ಪಟ್ಟ ಪ್ರತಿಯೊಂದು ಪದಾರ್ಥಗಳಲ್ಲೂ ಒಂದೊಂದನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು. ಸಮಾಧಾನಯಜ್ಞದ ರಕ್ತವನ್ನು ಚಿಮಿಕಿಸುವ ಯಾಜಕನಿಗೆ ಇದು ಸಲ್ಲತಕ್ಕದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮರ್ಪಿಸಿದ ಪ್ರತಿಯೊಂದು ವಿಧವಾದ ಯಜ್ಞದ ಪದಾರ್ಥಗಳಲ್ಲಿಯೂ ಒಂದೊಂದನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು. ಅವು ಯಜ್ಞವೇದಿಗೆ ಯಜ್ಞಪಶುವಿನ ರಕ್ತವನ್ನು ಎರಚಿದ ಯಾಜಕನಿಗೆ ಅರ್ಪಿಸಬೇಕು.
Kannada BSI Bible 2016
ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಎತ್ತುವ ಕಾಣಿಕೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದಾಗಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮರ್ಪಿಸಿದ ಪ್ರತಿಯೊಂದು ವಿಧವಾದ ಪದಾರ್ಥಗಳಲ್ಲಿಯೂ ಒಂದೊಂದನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು. ಅವು ವೇದಿಗೆ ಯಜ್ಞಪಶುವಿನ ರಕ್ತವನ್ನು ಎರಚಿದ ಯಾಜಕನಿಗೆ ಆಗಬೇಕು.
Kannada Bible (KNCL) BSI 2016
ಸಮರ್ಪಿಸುವ ಪ್ರತಿಯೊಂದು ವಿಧವಾದ ಪದಾರ್ಥಗಳಲ್ಲಿಯೂ ಒಂದೊಂದನ್ನು ಸರ್ವೇಶ್ವರನಿಗೋಸ್ಕರ ಪ್ರತ್ಯೇಕಿಸಬೇಕು. ಅವು ಪೀಠಕ್ಕೆ ಬಲಿಪ್ರಾಣಿಯ ರಕ್ತವನ್ನು ಚಿಮುಕಿಸಿದ ಯಾಜಕನಿಗೆ ಸೇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಕಾಣಿಕೆಯನ್ನಾಗಿ ಯೆಹೋವ ದೇವರಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದ್ದಾಗಬೇಕು.