Leviticus 7:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮಾಧಾನಯಜ್ಞದ ಮಾಂಸವನ್ನು ಅದು ಸಮರ್ಪಣೆಯಾದ ದಿನದಲ್ಲಿಯೇ ತಿನ್ನಬೇಕು. ಒಬ್ಬನು ದೇವರಿಗೆ ತನ್ನ ಕೃತಜ್ಞತೆಯನ್ನು ಸೂಚಿಸುವುದಕ್ಕಾಗಿ ಈ ಕಾಣಿಕೆಯನ್ನು ಅರ್ಪಿಸುತ್ತಾನೆ. ಅದರ ಮಾಂಸದಲ್ಲಿ ಮರುದಿನದ ಮುಂಜಾನೆಯವರೆಗೆ ಏನೂ ಉಳಿಸಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೃತಜ್ಞತೆಯ ಯಜ್ಞಪಶುವಿನ ಮಾಂಸವನ್ನು ಯಜ್ಞವು ನಡೆದ ದಿನದಲ್ಲೇ ಭೋಜನ ಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು.
Kannada BSI Bible 2016
ಉಪಕಾರಸ್ತುತಿಗಾಗಿ ಅವನ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ಅರ್ಪಿ ಸಲ್ಪಟ್ಟ ದಿನವೇ ತಿನ್ನಬೇಕು; ಅವನು ಅದರಲ್ಲಿ ಬೆಳಗಿನ ವರೆಗೆ ಯಾವದನ್ನೂ ಉಳಿಸಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೃತಜ್ಞತಾಯಜ್ಞಪಶುವಿನ ಮಾಂಸವನ್ನು ಯಜ್ಞವು ನಡೆದ ದಿನದಲ್ಲೇ ಭೋಜನ ಮಾಡಬೇಕು; ಮರುದಿನದವರೆಗೆ ಸ್ವಲ್ಪವನ್ನಾದರೂ ಉಳಿಸಕೂಡದು.
Kannada Bible (KNCL) BSI 2016
ಕೃತಜ್ಞತಾ ಬಲಿಪ್ರಾಣಿಯ ಮಾಂಸವನ್ನು ಬಲಿ ನಡೆದ ದಿನದಲ್ಲೇ ಭೋಜನ ಮಾಡಬೇಕು. ಮರುದಿನದವರೆಗೆ ಕಿಂಚಿತ್ತನ್ನೂ ಉಳಿಸಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉಪಕಾರ ಸ್ತುತಿಗಾಗಿ ಅವನು ಸಮಾಧಾನ ಬಲಿಯ ಮಾಂಸವನ್ನು ಅರ್ಪಿಸಲಾದ ದಿನವೇ ತಿನ್ನಬೇಕು. ಅವನು ಅದರಲ್ಲಿ ಬೆಳಗಿನವರೆಗೆ ಯಾವುದನ್ನೂ ಉಳಿಸಬಾರದು.