Leviticus 7:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯಾವನಾದರೂ ಸ್ವಇಚ್ಛೆಯ ಕಾಣಿಕೆಗಾಗಲಿ ಹರಕೆಯನ್ನು ಸಲ್ಲಿಸುವುದಕ್ಕಾಗಲಿ ಸಮಾಧಾನಯಜ್ಞ ಅರ್ಪಿಸಬಹುದು ಅಥವಾ ಆ ವ್ಯಕ್ತಿ ದೇವರಿಗೆ ಕಾಣಿಕೆಯನ್ನು ಅರ್ಪಿಸಿದರೆ, ಅವನು ಅದರ ಯಜ್ಞಮಾಂಸವನ್ನು ಸಮರ್ಪಿಸಿದ ದಿನದಲ್ಲಿಯೇ ತಿನ್ನಬೇಕು. ಉಳಿದದ್ದನ್ನು ಮರುದಿನ ತಿನ್ನಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಯಾರಾದರೂ ಹರಕೆಯನ್ನು ಸಲ್ಲಿಸುವುದಕ್ಕಾಗಲಿ, ಸ್ವ ಇಚ್ಛೆಯಿಂದಾಗಲಿ ಅಂತಹ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಆದರೆ ಉಳಿದದ್ದನ್ನು ಮರುದಿನದಲ್ಲಿ ತಿನ್ನಬಹುದು.
Kannada BSI Bible 2016
ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಇಚ್ಛೆಯಾದ ಸಮರ್ಪಣೆ ಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ತಿನ್ನಬೇಕು; ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರಾದರೂ ಹರಕೆಯನ್ನು ಸಲ್ಲಿಸುವದಕ್ಕಾಗಲಿ ಸ್ವೇಚ್ಫೆಯಿಂದಾಗಲಿ ಅಂಥ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಆದರೆ ವಿುಕ್ಕದ್ದನ್ನು ಮರುದಿನದಲ್ಲಿ ತಿನ್ನಬಹುದು.
Kannada Bible (KNCL) BSI 2016
“ಯಾರಾದರು ಹರಕೆಯನ್ನು ಸಲ್ಲಿಸುವುದಕ್ಕಾಗಿ ಅಥವಾ ಸ್ವೇಚ್ಛೆಯಿಂದ ಅಂಥ ಬಲಿಯನ್ನು ಒಪ್ಪಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಪೂರ್ತಿಯಾಗಿ ಊಟ ಮಾಡಬೇಕಾಗಿಲ್ಲ; ಮಿಕ್ಕದ್ದನ್ನು ಮರುದಿನ ತಿನ್ನಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಯಿಚ್ಛೆಯಾದ ಸಮರ್ಪಣೆಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ಅದನ್ನು ತಿನ್ನಬೇಕು. ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬಹುದು.