Leviticus 7:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕನು ಸರ್ವಾಂಗಹೋಮ ಸಮರ್ಪಣೆಗಳ ಪಶುವನ್ನು ವಧಿಸುವ ಸ್ಥಳದಲ್ಲಿಯೇ ದೋಷಪರಿಹಾರಕ ಪಶುವನ್ನು ವಧಿಸಬೇಕು. ಬಳಿಕ ಯಾಜಕನು ದೋಷಪರಿಹಾರಕ ಯಜ್ಞದ ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸರ್ವಾಂಗಹೋಮಪಶುವನ್ನು ವಧಿಸುವ ಸ್ಥಳದಲ್ಲೇ ಪ್ರಾಯಶ್ಚಿತ್ತಯಜ್ಞದ ಪಶುವನ್ನು ವಧಿಸಬೇಕು. ಯಾಜಕನು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
Kannada BSI Bible 2016
ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಅತಿಕ್ರಮದ ಬಲಿಯನ್ನು ವಧಿಸಬೇಕು: ಅವನು ಅದರ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸರ್ವಾಂಗಹೋಮಪಶುವನ್ನು ವಧಿಸುವ ಸ್ಥಳದಲ್ಲೇ ಪ್ರಾಯಶ್ಚಿತ್ತ ಯಜ್ಞಪಶುವನ್ನೂ ವಧಿಸಬೇಕು. ಯಾಜಕನು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು.
Kannada Bible (KNCL) BSI 2016
ದಹನ ಬಲಿಪ್ರಾಣಿಯನ್ನು ವಧಿಸಿದ ಸ್ಥಳದಲ್ಲೇ ಈ ಪ್ರಾಯಶ್ಚಿತ್ತ ಬಲಿಪ್ರಾಣಿಯನ್ನು ವಧಿಸಬೇಕು. ಯಾಜಕನು ಅದರ ರಕ್ತವನ್ನು ಬಲಿಪೀಠದ ಸುತ್ತಲು ಚಿಮುಕಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಪ್ರಾಯಶ್ಚಿತ್ತದ ಬಲಿಯನ್ನು ವಧಿಸಬೇಕು. ಅದರ ರಕ್ತವನ್ನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಬೇಕು.