Leviticus 7:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಒಬ್ಬನಿಗೆ ಮನುಷ್ಯದೇಹದಿಂದ ಆಗಿರುವ ಅಶುದ್ಧ ವಸ್ತು, ಅಶುದ್ಧ ಮೃಗ, ನಿಷಿದ್ಧ ವಸ್ತು ಇವುಗಳಲ್ಲಿ ಯಾವುದಾದರೂ ಸ್ಪರ್ಶವಾಗಿದ್ದರೆ ಅವನು ಅಶುದ್ಧನಾಗಿದ್ದಾನೆ. ಅವನು ಯೆಹೋವನಿಗೆ ಸೇರಿದ ಸಮಾಧಾನಯಜ್ಞಗಳ ಮಾಂಸವನ್ನು ತಿಂದರೆ, ಅವನನ್ನು ಕುಲದಿಂದ ತೆಗೆದುಹಾಕಬೇಕು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಿಗಾದರೂ ಮನುಷ್ಯದೇಹದಿಂದ ಉಂಟಾದ ಅಶುದ್ಧವಸ್ತು ಅಥವಾ ಅಶುದ್ಧ ಮೃಗ ಮತ್ತು ನಿಷಿದ್ಧವಸ್ತು ಇವುಗಳಲ್ಲಿ ಯಾವುದಾದರೂ ಸೋಂಕಿದರೆ ಮತ್ತು ಅವನು ಯೆಹೋವನಿಗೆ ಸಮರ್ಪಿತವಾದ ಯಜ್ಞಪಶುವಿನ ಮಾಂಸವನ್ನು ತಿಂದರೆ ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು’” ಎಂದು ಹೇಳಿದನು.
Kannada BSI Bible 2016
ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧತ್ವವನ್ನಾಗಲಿ ಯಾವುದೇ ಅಶುದ್ಧ ವಾದದ್ದನ್ನಾಗಲಿ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧ ವಸ್ತುವನ್ನಾಗಲಿ ಯಾವುದೇ ಅಶುದ್ಧ ಪ್ರಾಣಿ ಯನ್ನಾಗಲಿ ಮುಟ್ಟಿದರೂ ಮತ್ತು ಕರ್ತನಿಗೆ ಸಂಬಂಧಿ ಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೂ ಅವನು ತನ್ನ ಜನರಿಂದ ತೆಗೆದುಹಾಕಲ್ಪಡ ಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಿಗಾದರೂ ಮನುಷ್ಯ ದೇಹದಿಂದುಂಟಾದ ಅಶುದ್ಧ ವಸ್ತು, ಅಶುದ್ಧ ಮೃಗ, ನಿಷಿದ್ಧವಸ್ತು ಇವುಗಳಲ್ಲಿ ಯಾವದಾದರೂ ಸೋಂಕಿದರೆ ಅವನು ಯೆಹೋವನಿಗೆ ಸಮರ್ಪಿತವಾದ ಯಜ್ಞಪಶುವಿನ ಮಾಂಸವನ್ನು ತಿಂದರೆ ಕುಲದಿಂದ ತೆಗೆದುಹಾಕಲ್ಪಡಬೇಕು.
Kannada Bible (KNCL) BSI 2016
“ಯಾರಾದರು ಅಶುದ್ಧರಾಗಿದ್ದು ಸರ್ವೇಶ್ವರನಿಗೆ ಸಮರ್ಪಿತವಾದ ಶಾಂತಿಸಮಾಧಾನದ ಬಲಿಪ್ರಾಣಿಯ ಮಾಂಸವನ್ನು ತಿಂದರೆ ಅಂಥವರನ್ನು ತಮ್ಮ ಕುಲದಿಂದ ತೆಗೆದುಹಾಕಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧ ವಸ್ತುವನ್ನೇ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧವಸ್ತುವನ್ನಾಗಲಿ ಮುಟ್ಟಿದರೆ ಮತ್ತು ಯೆಹೋವ ದೇವರಿಗೆ ಸಂಬಂಧಿಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು,’ ” ಎಂದರು.