Leviticus 7:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ತನ್ನಷ್ಟಕ್ಕೆ ತಾನೇ ಸತ್ತ ಪ್ರಾಣಿಯ ಅಥವಾ ಬೇರೆ ಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದು. ಆದರೆ ನೀವು ಅದನ್ನು ಎಂದಿಗೂ ತಿನ್ನಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂತಹ ಪಶುವು ರೋಗದಿಂದ ಸತ್ತರೆ ಇಲ್ಲವೇ ಕಾಡುಮೃಗವು ಕೊಂದರೆ, ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದೇ ಹೊರತು ಎಷ್ಟು ಮಾತ್ರವೂ ತಿನ್ನಬಾರದು.
Kannada BSI Bible 2016
ತಾನಾಗಿಯೇ ಸತ್ತ ಪ್ರಾಣಿಯ ಕೊಬ್ಬನ್ನೂ ಮೃಗಗಳು ಸೀಳಿದ್ದರ ಕೊಬ್ಬನ್ನೂ ಬೇರೆ ಯಾವದಕ್ಕಾದರೂ ಉಪಯೋಗಿಸ ಬಹುದು; ಆದರೆ ನೀವು ಅದನ್ನು ಎಷ್ಟು ಮಾತ್ರವೂ ತಿನ್ನಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂಥ ಪಶುವು ರೋಗದಿಂದ ಸತ್ತದ್ದಾದರೆ ಇಲ್ಲವೇ ಕಾಡು ಮೃಗವು ಕೊಂದದ್ದಾದರೆ ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದೇ ಹೊರತು ಎಷ್ಟು ಮಾತ್ರವೂ ತಿನ್ನಬಾರದು.
Kannada Bible (KNCL) BSI 2016
ಅಂಥ ಪ್ರಾಣಿ ರೋಗದಿಂದ ಸತ್ತರೆ, ಇಲ್ಲವೆ ಕಾಡುಮೃಗದಿಂದ ಕೊಲ್ಲಲ್ಪಟ್ಟರೆ ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಿಕೊಳ್ಳಬಹುದು; ಆದರೆ ಎಷ್ಟು ಮಾತ್ರಕ್ಕೂ ತಿನ್ನಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಾನಾಗಿಯೇ ಸತ್ತ ಪ್ರಾಣಿಯ ಕೊಬ್ಬನ್ನೂ, ಕಾಡುಮೃಗಗಳು ಸೀಳಿದ್ದರ ಕೊಬ್ಬನ್ನೂ ಬೇರೆ ಯಾವುದಕ್ಕಾದರೂ ಉಪಯೋಗಿಸಬಹುದು. ಆದರೆ ನೀವು ಅದನ್ನು ಎಷ್ಟು ಮಾತ್ರವೂ ತಿನ್ನಬಾರದು.