Leviticus 7:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾವನಾದರೂ ಅಗ್ನಿಯ ಮೂಲಕ ಯೆಹೋವನಿಗೆ ಸಮರ್ಪಣೆಯಾದ ಪಶುವಿನ ಕೊಬ್ಬನ್ನು ತಿಂದರೆ, ಅವನನ್ನು ಅವನ ಜನರಿಂದ ತೆಗೆದುಹಾಕಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯರು ಯೆಹೋವನಿಗೆ ಹೋಮಮಾಡುವಂತಹ ಪಶು ಜಾತಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು.
Kannada BSI Bible 2016
ಮನುಷ್ಯರು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯನು ಯೆಹೋವನಿಗೆ ಹೋಮಮಾಡುವಂಥ ಪಶುಜಾತಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು.
Kannada Bible (KNCL) BSI 2016
ಜನರು ಸರ್ವೇಶ್ವರನಿಗೆ ಹೋಮ ಮಾಡುವಂಥ ಪ್ರಾಣಿಪಶುಗಳ ಕೊಬ್ಬನ್ನು ಯಾರಾದರು ತಿಂದರೆ ಅವರು ಕುಲದಿಂದ ಬಹಿಷ್ಕೃತರಾಗಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಮನುಷ್ಯರು ಯೆಹೋವ ದೇವರಿಗೆ ಬೆಂಕಿಯಿಂದ ಸಮರ್ಪಿಸಿದ ಬಲಿ, ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ, ಅಂಥವರನ್ನು ತಮ್ಮ ಜನರಿಂದ ತೆಗೆದುಹಾಕಬೇಕು.