Leviticus 7:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಾಣಿಕೆಯ ಆ ಭಾಗವು ಅಗ್ನಿಯಲ್ಲಿ ಹೋಮಮಾಡಬೇಕು. ಅವನು ಕಾಣಿಕೆಯನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಗೆ ಹೋಗಬೇಕು. ಅವನು ಆ ಪಶುವಿನ ಕೊಬ್ಬನ್ನೂ ಎದೆಯ ಭಾಗವನ್ನೂ ಯಾಜಕನ ಬಳಿಗೆ ತರಬೇಕು. ಯೆಹೋವನ ಸನ್ನಿಧಿಯಲ್ಲಿ ಎದೆಯ ಭಾಗವು ನಿವಾಳಿಸಲ್ಪಡಬೇಕು. ಇದು ನೈವೇದ್ಯ ಸಮರ್ಪಣೆಯಾಗಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದುದನ್ನು ಅಂದರೆ ಪಶುವಿನ ಕೊಬ್ಬನ್ನು ತನ್ನ ಕೈಯಿಂದಲೇ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನು ನೈವೇದ್ಯರೂಪವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವುದಕ್ಕಾಗಿ ತಂದು ಸಮರ್ಪಿಸಬೇಕು.
Kannada BSI Bible 2016
ಬೆಂಕಿಯಿಂದ ಮಾಡಿದ ಕರ್ತನ ಅರ್ಪಣೆ ಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಕರ್ತನ ಮುಂದೆ ಅಲ್ಲಾಡುವ ಸಮರ್ಪಣೆಗಾಗಿ ಎದೆಯು ಅಲ್ಲಾಡಿಸಲ್ಪಡುವಂತೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದದ್ದನ್ನು ಅಂದರೆ ಪಶುವಿನ ಕೊಬ್ಬನ್ನು ತನ್ನ ಕೈಯಿಂದಲೇ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನೂ ನೈವೇದ್ಯರೂಪವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವದಕ್ಕಾಗಿ ತಂದು ಸಮರ್ಪಿಸಬೇಕು.
Kannada Bible (KNCL) BSI 2016
ಸರ್ವೇಶ್ವರನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದುದನ್ನು ಅಂದರೆ ಪ್ರಾಣಿಯ ಕೊಬ್ಬನ್ನು ತನ್ನ ಕೈಯಿಂದಲೆ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನು ನೈವೇದ್ಯರೂಪವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಲು ತಂದು ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಯೆಹೋವ ದೇವರ ಮುಂದೆ ನೈವೇದ್ಯರೂಪವಾಗಿ ನಿವಾಳಿಸುವದಕ್ಕೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು.