Leviticus 7:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಗಳಲ್ಲಿ ಇವೇ ಆರೋನನಿಗೂ ಅವನ ಪುತ್ರರಿಗೂ ಕೊಡಲ್ಪಟ್ಟ ಭಾಗಗಳಾಗಿವೆ. ಆರೋನನೂ ಅವನ ಪುತ್ರರೂ ಯೆಹೋವನ ಯಾಜಕರಾಗಿ ಸೇವೆ ಮಾಡುವಾಗಲೆಲ್ಲಾ ಯಜ್ಞಗಳಲ್ಲಿ ಆ ಪಾಲನ್ನು ಪಡೆಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶದವರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳಾಗಿರುವವು. ಮೋಶೆ ಅವರನ್ನು ಯೆಹೋವನ ಸನ್ನಿಧಿಯಲ್ಲಿ ಯಾಜಕೋದ್ಯೋಗಕ್ಕಾಗಿ ಪ್ರತಿಷ್ಠಿಸಿದ ದಿನದಲ್ಲೇ ಇದು ನೇಮಕವಾಯಿತು.
Kannada BSI Bible 2016
ಆರೋನನ ಅಭಿಷೇಕವೂ ಅವನ ಮಕ್ಕಳ ಅಭಿಷೇಕವೂ ಆಗುವ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಕರ್ತನಿಗೆ ಒಪ್ಪಿಸಿ ಕೊಳ್ಳುವಾಗ ಕರ್ತನಿಗೆ ಬೆಂಕಿಯಿಂದ ಮಾಡಲ್ಪಡುವ ಸಮರ್ಪಣೆಗಳಲ್ಲಿ ಇರುವ ಪಾಲು ಇದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶದವರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳಾಗಿರುವವು. [ಮೋಶೆ] ಅವರನ್ನು ಯೆಹೋವನ ಸನ್ನಿಧಿಯಲ್ಲಿ ಯಾಜಕೋದ್ಯೋಗಕ್ಕಾಗಿ ಪ್ರತಿಷ್ಠಿಸಿದ ದಿನದಲ್ಲೇ ಇದು ನೇಮಕವಾಯಿತು.
Kannada Bible (KNCL) BSI 2016
ಸರ್ವೇಶ್ವರನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶಜರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳು. ಮೋಶೆ ಅವರನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಯಾಜಕ ಸೇವಾವೃತ್ತಿಗಾಗಿ ಪ್ರತಿಷ್ಠಾಪಿಸಿದ ದಿನದಂದೇ ಇದು ನೇಮಕವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರೋನನ ಅಭಿಷೇಕದ ಮತ್ತು ಅವನ ಮಕ್ಕಳ ಅಭಿಷೇಕದ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಯೆಹೋವ ದೇವರಿಗೆ ಒಪ್ಪಿಸಿಕೊಳ್ಳುವಾಗ, ಯೆಹೋವ ದೇವರಿಗೆ ಬೆಂಕಿಯಿಂದ ಸಮರ್ಪಿಸುವ ಬಲಿಗಳಲ್ಲಿ ಇರುವ ಪಾಲು ಇದೆ.