Leviticus 7:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಯಾಜಕರನ್ನು ಅಭಿಷೇಕಿಸಿದ ಸಮಯದಲ್ಲಿ ಆತನು ಯಾಜಕರಿಗೆ ಆ ಭಾಗಗಳನ್ನು ಕೊಡಬೇಕೆಂಬುದಾಗಿ ಇಸ್ರೇಲರಿಗೆ ಆಜ್ಞಾಪಿಸಿದನು. ಜನರು ಯಾಜಕರಿಗೆ ಆ ಭಾಗಗಳನ್ನು ಎಂದೆಂದಿಗೂ ಕೊಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಇವುಗಳನ್ನು ಯಾಜಕರಿಗೆ ಸಲ್ಲಿಸಬೇಕೆಂದು ಯೆಹೋವನು ಮೋಶೆಯ ಮುಖಾಂತರ ಕೈಯಿಂದ ಅವರನ್ನು ಪ್ರತಿಷ್ಠಿಸಿ ಅಭಿಷೇಕಿಸಿದ ದಿನದಲ್ಲೇ ನೇಮಿಸಿದನು.
Kannada BSI Bible 2016
ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಕರ್ತನು ಇಸ್ರಾ ಯೇಲನ ಮಕ್ಕಳಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಇವುಗಳನ್ನು ಯಾಜಕರಿಗೆ ಸಲ್ಲಿಸಬೇಕೆಂದು ಯೆಹೋವನು [ಮೋಶೆಯ ಕೈಯಿಂದ] ಅವರನ್ನು ಪ್ರತಿಷ್ಠಿಸಿ ಅಭಿಷೇಕಿಸಿದ ದಿನದಲ್ಲಿ ಅಪ್ಪಣೆಮಾಡಿದನು.
Kannada Bible (KNCL) BSI 2016
ಇಸ್ರಯೇಲರು ಇವುಗಳನ್ನು ಯಾಜಕರಿಗೆ ಸಲ್ಲಿಸಬೇಕೆಂದು ಸರ್ವೇಶ್ವರ ಅವರನ್ನು ಮೋಶೆಯ ಮುಖಾಂತರ ಪ್ರತಿಷ್ಠಿಸಿ ಅಭಿಷೇಕಿಸಿದ ದಿನದಲ್ಲೇ ವಿಧಿಸಿದರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಯೆಹೋವ ದೇವರು ಇಸ್ರಾಯೇಲರಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾರೆ.