Leviticus 7:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವುಗಳೇ ಸರ್ವಾಂಗಹೋಮಗಳ, ಧಾನ್ಯಸಮರ್ಪಣೆಗಳ, ಪಾಪಪರಿಹಾರಕ ಯಜ್ಞಗಳ, ದೋಷಪರಿಹಾರಕ ಯಜ್ಞಗಳ, ಸಮಾಧಾನಯಜ್ಞಗಳ ಮತ್ತು ಯಾಜಕರನ್ನು ಪ್ರತಿಷ್ಠಿಸುವ ನಿಯಮಗಳಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸರ್ವಾಂಗಹೋಮ, ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ, ಯಾಜಕ ಪ್ರತಿಷ್ಠೆ ಮತ್ತು ಸಮಾಧಾನಯಜ್ಞ ಎಂಬ ಯಜ್ಞಗಳ ವಿಷಯದಲ್ಲಿ ಮೇಲೆ ಹೇಳಿದ ನಿಯಮಗಳನ್ನು ಅನುಸರಿಸಬೇಕು.
Kannada BSI Bible 2016
ದಹನಬಲಿ ಆಹಾರದಬಲಿ ಪಾಪದಬಲಿ ಅತಿಕ್ರಮದಬಲಿ ಪ್ರತಿಷ್ಠೆಗಳ ಮತ್ತು ಸಮಾಧಾನದ ಯಜ್ಞಾರ್ಪಣೆಗಳು ಇವೇ.ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಇವುಗಳನ್ನು ಕರ್ತನು ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಆಜ್ಞಾಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸರ್ವಾಂಗಹೋಮ, ಧಾನ್ಯನೈವೇದ್ಯ, ದೋಷಪರಿಹಾರಕಯಜ್ಞ, ಪ್ರಾಯಶ್ಚಿತ್ತಯಜ್ಞ, ಯಾಜಕ ಪ್ರತಿಷ್ಠೆ, ಸಮಾಧಾನ ಯಜ್ಞ ಎಂಬಿವುಗಳ ವಿಷಯದಲ್ಲಿ ಮೇಲೆ ಕಂಡದ್ದೆ ವಿಧಿ.
Kannada Bible (KNCL) BSI 2016
ದಹನಬಲಿದಾನ, ಧಾನ್ಯನೈವೇದ್ಯ, ದೋಷಪರಿಹಾರಕ ಬಲಿ, ಪ್ರಾಯಶ್ಚಿತ್ತ ಬಲಿ, ಯಾಜಕ ಅಭ್ಯಂಜನ ಬಲಿ, ಶಾಂತಿಸಮಾಧಾನ ಬಲಿ ಎಂಬ ಇವುಗಳ ವಿಷಯದಲ್ಲಿ ಮೇಲೆ ಹೇಳಿದ್ದೇ ಬಲಿದಾನ ವಿಧಿಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಹನಬಲಿ, ಧಾನ್ಯ ಬಲಿ, ಪಾಪ ಪರಿಹಾರದ ಬಲಿ, ಪ್ರಾಯಶ್ಚಿತ್ತದ ಬಲಿ, ಪ್ರತಿಷ್ಠೆಗಳ ಮತ್ತು ಸಮಾಧಾನದ ಬಲಿಗಳ ಉಪದೇಶಗಳು ಇವೇ.