Leviticus 7:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಮೋಶೆಗೆ ಆ ನಿಯಮಗಳನ್ನು ಸೀನಾಯಿ ಬೆಟ್ಟದಲ್ಲಿ ಕೊಟ್ಟನು. ಇಸ್ರೇಲರು ಯೆಹೋವನಿಗೆ ತಮ್ಮ ಯಜ್ಞಗಳನ್ನು ಅರ್ಪಿಸಬೇಕೆಂದು ಸೀನಾಯಿ ಮರುಭೂಮಿಯಲ್ಲಿ ಆಜ್ಞಾಪಿಸಿದ ದಿನದಲ್ಲಿ ಯೆಹೋವನು ಆ ನಿಯಮಗಳನ್ನು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಈ ಎಲ್ಲಾ ಆಜ್ಞೆಗಳನ್ನು ಕೊಟ್ಟನು. ಮೋಶೆ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರು ಅರ್ಪಿಸಬೇಕಾದ ಯಜ್ಞವನ್ನು ಯೆಹೋವನಿಗೆ ಸಮರ್ಪಿಸಬೇಕೆಂದು ಆಜ್ಞಾಪಿಸಿ ಅವರಿಗೆ ಮೇಲೆ ಕಂಡ ನಿಯಮಗಳನ್ನು ಕೊಟ್ಟನು.
Kannada BSI Bible 2016
ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಇವುಗಳನ್ನು ಕರ್ತನು ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಆಜ್ಞಾಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಈ ಆಜ್ಞೆಗಳನ್ನು ಕೊಟ್ಟನು. ಮೋಶೆ ಸೀನಾಯಿ ಅರಣ್ಯದಲ್ಲಿ - ಇಸ್ರಾಯೇಲ್ಯರು ಅರ್ಪಿಸಬೇಕಾದದ್ದನ್ನು ಯೆಹೋವನಿಗೆ ಸಮರ್ಪಿಸಬೇಕೆಂದು ಆಜ್ಞಾಪಿಸಿ ಅವರಿಗೆ ಮೇಲೆ ಕಂಡ ವಿಧಿಗಳನ್ನು ಕೊಟ್ಟನು.
Kannada Bible (KNCL) BSI 2016
ಸರ್ವೇಶ್ವರ ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಈ ಆಜ್ಞೆಗಳನ್ನು ಕೊಟ್ಟರು. ಸೀನಾಯಿ ಮರುಭೂಮಿಯಲ್ಲಿ ಇಸ್ರಯೇಲರು ಅರ್ಪಿಸಬೇಕಾದುದನ್ನು ಸರ್ವೇಶ್ವರನಿಗೆ ಅರ್ಪಿಸಬೇಕೆಂದು ಮೋಶೆ ಆಜ್ಞಾಪಿಸಿ ಮೇಲ್ಕಂಡ ವಿಧಿಗಳನ್ನು ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವುಗಳನ್ನು ಯೆಹೋವ ದೇವರು ಇಸ್ರಾಯೇಲರಿಗೆ ಅವರು ತಮ್ಮ ಕಾಣಿಕೆಗಳನ್ನು ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಸೀನಾಯಿ ಮರುಭೂಮಿಯ ಸೀನಾಯಿ ಬೆಟ್ಟದಲ್ಲಿ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದರು.