Leviticus 7:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರತಿ ಧಾನ್ಯಸಮರ್ಪಣೆಯು ಅದನ್ನು ಅರ್ಪಿಸುವ ಯಾಜಕನಿಗೆ ಸೇರುತ್ತದೆ. ಒಲೆಯಲ್ಲಾಗಲಿ ಕಬ್ಬಿಣದ ಹಂಚಿನಲ್ಲಾಗಲಿ ಬಾಂಡ್ಲೆಯಲ್ಲಾಗಲಿ ಬೇಯಿಸಿದ ಧಾನ್ಯಸಮರ್ಪಣೆಗಳನ್ನು ಯಾಜಕನು ಪಡೆಯುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಲೆಯಲ್ಲಾಗಲಿ, ಕಬ್ಬಿಣದ ಹಂಚಿನಲ್ಲಾಗಲಿ ಅಥವಾ ಬಾಂಡ್ಲಿಯಲ್ಲಾಗಲಿ ಬೇಯಿಸಿದ ನೈವೇದ್ಯಪದಾರ್ಥವೆಲ್ಲಾ ಸಮರ್ಪಿಸುವ ಯಾಜಕನಿಗೆ ಆಗಬೇಕು.
Kannada BSI Bible 2016
ಒಲೆಯಲ್ಲಿ ಬೇಯಿಸಿದ್ದೂ ಬಾಂಡ್ಲೆಯಲ್ಲಿಯೂ ಬೋಗುಣಿಯಲ್ಲಿಯೂ ತಯಾ ರಿಸಿದ ಎಲ್ಲಾ ಆಹಾರದ ಅರ್ಪಣೆಯೂ ಸಮರ್ಪಿಸಿದ ಯಾಜಕನದಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಲೆಯಲ್ಲಾಗಲಿ ಕಬ್ಬಿಣದ ಹಂಚಿನಲ್ಲಾಗಲಿ ಬಾಂಡ್ಲೆಯಲ್ಲಾಗಲಿ ಬೇಯಿಸಿದ ನೈವೇದ್ಯಪದಾರ್ಥವೆಲ್ಲಾ ಅದನ್ನು ಸಮರ್ಪಿಸುವ ಯಾಜಕನಿಗೆ ಆಗಬೇಕು.
Kannada Bible (KNCL) BSI 2016
ಒಲೆಯಲ್ಲಾಗಲಿ, ಕಬ್ಬಿಣದ ಹಂಚಿನಲ್ಲಾಗಲಿ, ಬಾಂಡ್ಲಿಯಲ್ಲಾಗಲಿ ಬೇಯಿಸಿದ ನೈವೇದ್ಯ ಪದಾರ್ಥವೆಲ್ಲ ಅದನ್ನು ಸಮರ್ಪಿಸುವ ಯಾಜಕನಿಗೆ ಸೇರತಕ್ಕದ್ದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಲೆಯಲ್ಲಿ ಬೇಯಿಸಿದ ಬಾಂಡ್ಲಿಯಲ್ಲಿಯೂ ಬೋಗುಣಿಯಲ್ಲಿಯೂ ತಯಾರಿಸಿದ ಎಲ್ಲಾ ಧಾನ್ಯ ಸಮರ್ಪಣೆಯು ಸಮರ್ಪಿಸಿದ ಯಾಜಕನದಾಗಿರಬೇಕು.