Leviticus 8:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಮೋಶೆಯು ಸ್ವಲ್ಪ ಅಭಿಷೇಕತೈಲವನ್ನು ಆರೋನನ ತಲೆಗೆ ಹೊಯಿದು ಅವನನ್ನು ಪವಿತ್ರಗೊಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರೋನನನ್ನು ಪ್ರತಿಷ್ಠಿಸುವುದಕ್ಕಾಗಿ ಆ ತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಿದನು.
Kannada BSI Bible 2016
ಅವನು ಆರೋನನ ತಲೆಯ ಮೇಲೆ ಅಭಿಷೇಕ ತೈಲವನ್ನು ಸುರಿದು ಅವನನ್ನು ಪವಿತ್ರ ಮಾಡುವದಕ್ಕಾಗಿ ಅಭಿಷೇಕಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಲ್ಲಿ ಸ್ವಲ್ಪವನ್ನು ಆರೋನನ ತಲೆಯ ಮೇಲೆ ಹೊಯಿದು ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.
Kannada Bible (KNCL) BSI 2016
ಆ ಎಣ್ಣೆಯಲ್ಲಿ ಸ್ವಲ್ಪವನ್ನು ಆರೋನನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅಭಿಷೇಕ ತೈಲದಿಂದ ಆರೋನನ ತಲೆಯ ಮೇಲೆ ಸುರಿದು, ಅವನನ್ನು ಪವಿತ್ರ ಮಾಡುವುದಕ್ಕಾಗಿ ಅವನನ್ನು ಅಭಿಷೇಕಿಸಿದನು.