Leviticus 8:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಮೋಶೆಯು ಆರೋನನ ಪುತ್ರರನ್ನು ಕರೆದುಕೊಂಡು ಬಂದು ಅವರಿಗೆ ನಿಲುವಂಗಿಗಳನ್ನು ತೊಡಿಸಿ ನಡುಕಟ್ಟನ್ನು ಕಟ್ಟಿದನು. ಬಳಿಕ ಅವರ ತಲೆಗಳಿಗೆ ಮುಂಡಾಸಗಳನ್ನು ಇಟ್ಟನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ನಿಲುವಂಗಿಗಳನ್ನು ತೊಡಿಸಿ, ನಡುಕಟ್ಟುಗಳನ್ನು ಸುತ್ತಿ, ತಲೆಗೆ ಪೇಟಗಳನ್ನು ಇಟ್ಟನು.
Kannada BSI Bible 2016
ಮೋಶೆಯು ಆರೋನನ ಮಕ್ಕಳನ್ನು ಕರತಂದು ಅವರ ಮೇಲೆ ಮೇಲಂಗಿಗಳನ್ನು ಹಾಕಿ ಅವರ ನಡುಗಳನ್ನು ಕಟ್ಟಿ ಕರ್ತನು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಯೆಹೋವನು ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು ಅವರಿಗೆ ನಿಲುವಂಗಿಗಳನ್ನು ತೊಡಿಸಿ ನಡುಕಟ್ಟುಗಳನ್ನು ಸುತ್ತಿ ಮುಂಡಾಸಗಳನ್ನು ಇಟ್ಟನು.
Kannada Bible (KNCL) BSI 2016
ಅನಂತರ ಸರ್ವೇಶ್ವರ ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ನಿಲುವಂಗಿಗಳನ್ನು ತೊಡಿಸಿ, ನಡುಕಟ್ಟುಗಳನ್ನು ಸುತ್ತಿ, ಪೇಟಗಳನ್ನು ತೊಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಆರೋನನ ಪುತ್ರರನ್ನು ಕರೆದುಕೊಂಡು ಬಂದು ಅವರಿಗೆ ನಿಲುವಂಗಿಗಳನ್ನು ತೊಡಿಸಿ, ಅವರ ನಡುಗಳನ್ನು ನಡುಕಟ್ಟುಗಳಿಂದ ಕಟ್ಟಿ, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಹಾಕಿದನು.