Leviticus 8:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೋರಿಯ ಚರ್ಮ, ಅದರ ಮಾಂಸ ಮತ್ತು ಅದರ ಶರೀರದ ಕಲ್ಮಶವನ್ನು ಅವನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಬೆಂಕಿಯಿಂದ ಸುಟ್ಟುಹಾಕಿದನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಆಜ್ಞಾಪಿಸಿದಂತೆ ಅದರಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮವನ್ನು, ಮಾಂಸವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಬೆಂಕಿಯಿಂದ ಸುಡಿಸಿಬಿಟ್ಟನು.
Kannada BSI Bible 2016
ಆದರೆ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಹೋರಿ ಯನ್ನೂ ಚರ್ಮವನ್ನೂ ಮಾಂಸವನ್ನೂ ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಆಜ್ಞಾಪಿಸಿದಂತೆ ಅದರಲ್ಲಿ ವಿುಕ್ಕದ್ದನ್ನೆಲ್ಲಾ ಅಂದರೆ ಅದರ ಚರ್ಮವನ್ನೂ ಮಾಂಸವನ್ನೂ ಕಲ್ಮಷವನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಿಸಿಬಿಟ್ಟನು.
Kannada Bible (KNCL) BSI 2016
ಸರ್ವೇಶ್ವರನ ಆಜ್ಞಾನುಸಾರ ಆ ಪ್ರಾಣಿಯ ಮಿಕ್ಕ ಭಾಗಗಳನ್ನು, ಅಂದರೆ ಅದರ ಚರ್ಮ, ಮಾಂಸ ಹಾಗು ಕಲ್ಮಷಗಳನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಡಿಸಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಹೋರಿಯ ಮಾಂಸವನ್ನೂ, ಅದರ ಚರ್ಮವನ್ನೂ, ಅದರ ಸಗಣಿಯನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.