Leviticus 8:2 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆರೋನನನ್ನೂ ಅವನ ಪುತ್ರರನ್ನೂ ಕರೆದುಕೊಂಡು ಅವರೊಂದಿಗೆ ಯಾಜಕ ವಸ್ತ್ರಗಳನ್ನೂ ಅಭಿಷೇಕ ತೈಲವನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯಿಂದ ತುಂಬಿರುವ ಪುಟ್ಟಿಯನ್ನೂ ತೆಗೆದುಕೊಂಡು ಬಾ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು,
Kannada BSI Bible 2016
ಆರೋನನನ್ನೂ ಅವನೊಂದಿಗೆ ಅವನ ಕುಮಾರರನ್ನೂ ಕರೆದು ಉಡುಪು ಗಳನ್ನೂ ಅಭಿಷೇಕ ತೈಲವನ್ನೂ ಪಾಪದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೊಂಡು.
Kannada Bible (KNCL) BSI 2016
“ನೀನು ಆರೋನನನ್ನೂ ಅವನ ಗಂಡು ಮಕ್ಕಳನ್ನೂ ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು, ಅಭಿಷೇಕ ತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಹಾಗು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡು ಬಾ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆರೋನನನ್ನೂ, ಅವನೊಂದಿಗೆ ಅವನ ಪುತ್ರರನ್ನೂ, ಉಡುಪುಗಳನ್ನೂ, ಅಭಿಷೇಕ ತೈಲವನ್ನೂ, ಪಾಪ ಪರಿಹಾರದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೋ.