Leviticus 8:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ಟಗರನ್ನು ತುಂಡುತುಂಡಾಗಿ ಕಡಿದು ಅದರ ಒಳಗಿನ ಭಾಗಗಳನ್ನು ಮತ್ತು ಕಾಲುಗಳನ್ನು ನೀರಿನಿಂದ ತೊಳೆದನು; ಇಡೀ ಟಗರನ್ನು ವೇದಿಕೆಯ ಮೇಲೆ ಹೋಮಮಾಡಿದನು. ಮೋಶೆಯು ಅದರ ತಲೆ, ತುಂಡುಗಳು ಮತ್ತು ಕೊಬ್ಬನ್ನು ಹೋಮಮಾಡಿದನು. ಅದು ಯೆಹೋವನಿಗೆ ಅಗ್ನಿಯ ಮೂಲಕ ಅರ್ಪಿಸಲ್ಪಟ್ಟ ಸುಗಂಧಕರವಾದ ಸರ್ವಾಂಗಹೋಮವಾಗಿದೆ. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು. (Verses 20-21)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಟಗರನ್ನು ತುಂಡುತುಂಡಾಗಿ ಕಡಿದ ಮೇಲೆ ಮೋಶೆ ಅದರ ತಲೆಯನ್ನು, ಮಾಂಸಭಾಗಗಳನ್ನು ಮತ್ತು ಕೊಬ್ಬನ್ನು ಹೋಮಮಾಡಿದನು.
Kannada BSI Bible 2016
ಅವನು ಆ ಟಗರನ್ನು ತುಂಡು ತುಂಡಾಗಿ ಮಾಡಿ ತಲೆಯನ್ನು ಆ ತುಂಡುಗಳನ್ನು ಆ ಕೊಬ್ಬನ್ನು ಸುಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಟಗರನ್ನು ತುಂಡುತುಂಡಾಗಿ ಕಡಿದ ಮೇಲೆ ಮೋಶೆ ಅದರ ತಲೆಯನ್ನೂ ಮಾಂಸಖಂಡಗಳನ್ನೂ ಕೊಬ್ಬನ್ನೂ ಹೋಮಮಾಡಿದನು.
Kannada Bible (KNCL) BSI 2016
ಆ ಟಗರನ್ನು ತುಂಡುತುಂಡಾಗಿ ಕಡಿದ ಮೇಲೆ ಮೋಶೆ ಅದರ ತಲೆಯನ್ನೂ ಮಾಂಸಖಂಡಗಳನ್ನೂ ಕೊಬ್ಬನ್ನೂ ಹೋಮಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಆ ಟಗರನ್ನು ತುಂಡುತುಂಡಾಗಿ ಮಾಡಿದನು. ಮೋಶೆಯು ತಲೆಯನ್ನು, ಆ ತುಂಡುಗಳನ್ನು, ಆ ಕೊಬ್ಬನ್ನು ಸುಟ್ಟನು.