Leviticus 8:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 20
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಿಂದ ತೊಳೆದು, ಮೋಶೆ ಆ ಟಗರನ್ನು ಯಜ್ಞವೇದಿಯ ಮೇಲೆ ಪೂರ್ತಿಯಾಗಿ ಹೋಮ ಮಾಡಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳಯುಕ್ತ ಸರ್ವಾಂಗಹೋಮವಾಗಿತ್ತು.
Kannada BSI Bible 2016
ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣ ವಾಗಿ ಯಜ್ಞವೇದಿಯ ಮೇಲೆ ಸುಟ್ಟನು. ಅದು ದಹನ ಬಲಿಯಾಗಿ ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ಸಮರ್ಪಣೆಯಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳಿಸಿ ಮೋಶೆ ಆ ಟಗರನ್ನು ಯಜ್ಞವೇದಿಯ ಮೇಲೆ ಪೂರ್ತಿಯಾಗಿ ಹೋಮಮಾಡಿಬಿಟ್ಟನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದು ಅಗ್ನಿಯ ಮೂಲಕ ಯೆಹೋವನಿಗೆ ಸುಗಂಧಕರವಾದ ಸರ್ವಾಂಗಹೋಮವಾಗಿತ್ತು.
Kannada Bible (KNCL) BSI 2016
ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಿಂದ ತೊಳೆಯಿಸಿ ಆ ಟಗರನ್ನು ಬಲಿಪೀಠದ ಮೇಲೆ ಪೂರ್ತಿಯಾಗಿ ಹೋಮಮಾಡಿಬಿಟ್ಟನು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿಯಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣವಾಗಿ ಬಲಿಪೀಠದ ಮೇಲೆ ಸುಟ್ಟನು. ಇದು ದಹನಬಲಿಯಾಗಿ ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸುವಾಸನೆಯ ಸಮರ್ಪಣೆಯಾಗಿತ್ತು.