Leviticus 8:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸುವುದಕ್ಕೆ ವಧಿಸಬೇಕಾದ ಎರಡನೆಯ ಟಗರನ್ನು ತಂದನು. ಆರೋನನೂ ಅವನ ಪುತ್ರರೂ ತಮ್ಮ ಕೈಗಳನ್ನು ಟಗರಿನ ತಲೆಯ ಮೇಲೆ ಇಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಅವನು ಯಾಜಕ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಬೇಕಾದ ಎರಡನೆಯ ಟಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟರು.
Kannada BSI Bible 2016
ಅವನು ಪ್ರತಿಷ್ಠೆಯ ಟಗರಾದ ಮತ್ತೊಂದು ಟಗರನ್ನು ತಂದನು; ಆರೋನನೂ ಅವನ ಕುಮಾ ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅವನು ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಬೇಕಾದ ಎರಡನೆಯ ಟಗರನ್ನು ತರಿಸಿದನು. ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟರು.
Kannada Bible (KNCL) BSI 2016
ಇದಾದ ಮೇಲೆ ಯಾಜಕಾಭಿಷೇಕಕ್ಕಾಗಿ ಸಮರ್ಪಿಸಬೇಕಾದ ಎರಡನೆಯ ಟಗರನ್ನು ಮೋಶೆ ತರಿಸಿದನು. ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಚಾಚಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಪ್ರತಿಷ್ಠೆಯ ಟಗರಾದ ಇನ್ನೊಂದು ಟಗರನ್ನು ತಂದನು. ಆಗ ಆರೋನನೂ, ಅವನ ಪುತ್ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.