Leviticus 8:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಮೋಶೆಯು ಆರೋನನ ಪುತ್ರರನ್ನು ವೇದಿಕೆಯ ಸಮೀಪಕ್ಕೆ ಕರೆಸಿ ಸ್ವಲ್ಪ ರಕ್ತವನ್ನು ಅವರ ಬಲಗಿವಿಗಳ ತುದಿಗೂ ಅವರ ಬಲಗೈಗಳ ಹೆಬ್ಬೆರಳಿಗೂ ಮತ್ತು ಅವರ ಬಲಗಾಲುಗಳ ಹೆಬ್ಬೆಟ್ಟಿಗೂ ಹಚ್ಚಿದನು; ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಿದನು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಆ ರಕ್ತದಲ್ಲಿ ಸ್ವಲ್ಪವನ್ನು ಅವರವರ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಿದನು.
Kannada BSI Bible 2016
ಮೋಶೆಯು ಆರೋನನ ಕುಮಾರರನ್ನು ಕರತಂದು ಅವರ ಬಲಗಿವಿಯ ತುದಿಯ ಮೇಲೆಯೂ ಬಲಗೈ ಹೆಬ್ಬೆರಳುಗಳ ಮೇಲೆಯೂ ಬಲಗಾಲುಗಳ ಹೆಬ್ಬೆರಳುಗಳ ಮೇಲೆಯೂ ಆ ರಕ್ತವನ್ನು ಹಚ್ಚಿದನು; ಅವನು ಆ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು ಆ ರಕ್ತದಲ್ಲಿ ಸ್ವಲ್ಪವನ್ನು ಅವರವರ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿ ಉಳಿದ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಿದನು.
Kannada Bible (KNCL) BSI 2016
ಬಳಿಕ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು ಆ ರಕ್ತದಲ್ಲಿ ಕಿಂಚಿತ್ತನ್ನು ಅವರವರ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗು ಹಾಗು ಬಲಗಾಲಿನ ಹೆಬ್ಬೆಟ್ಟಿಗು ಹಚ್ಚಿದನು. ಉಳಿದ ರಕ್ತವನ್ನು ಬಲಿಪೀಠದ ಸುತ್ತಲು ಚಿಮುಕಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಆರೋನನ ಪುತ್ರರನ್ನು ಕರೆತಂದು ಅವರ ಬಲಗಿವಿಯ ತುದಿಯ ಮೇಲೆಯೂ, ಅವರವರ ಬಲಗೈಯ ಹೆಬ್ಬೆರಳಿಗೂ, ಅವರವರ ಬಲಗಾಲಿನ ಹೆಬ್ಬೆಟ್ಟಿಗೂ ಆ ರಕ್ತವನ್ನು ಹಚ್ಚಿ, ಆ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಿದನು.