Leviticus 8:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೊಬ್ಬನ್ನು ಅಂದರೆ ಬಾಲದ ಮೇಲಿರುವ ಕೊಬ್ಬನ್ನೂ ಒಳಗಿನ ಭಾಗಗಳ ಮೇಲಿರುವ ಕೊಬ್ಬೆಲ್ಲವನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ಮತ್ತು ಬಲತೊಡೆಯನ್ನೂ ತೆಗೆದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆ ಟಗರಿನ ಕೊಬ್ಬನ್ನು ಅಂದರೆ ಬಾಲದ ಕೊಬ್ಬು, ಕರುಳುಗಳ ಮೇಲಣ ಎಲ್ಲಾ ಕೊಬ್ಬು, ಕಳಿಜದ ಹತ್ತಿರವಿರುವ ಕೊಬ್ಬು, ಎರಡು ಮೂತ್ರಪಿಂಡಗಳು, ಅವುಗಳ ಮೇಲಿದ್ದ ಕೊಬ್ಬನ್ನು ಮತ್ತು ಬಲತೊಡೆಯನ್ನು,
Kannada BSI Bible 2016
ಅವನು ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲಭುಜವನ್ನೂ ತೆಗೆದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆ ಟಗರಿನ ಕೊಬ್ಬನ್ನೂ ಅಂದರೆ ಬಾಲದ ಕೊಬ್ಬು, ಕರುಳುಗಳ ಮೇಲಣ ಎಲ್ಲಾ ಕೊಬ್ಬು, ಕಾಳಿಜದ ಹತ್ತಿರವಿರುವ ಕೊಬ್ಬು, ಎರಡು ಹುರುಳಿಕಾಯಿಗಳು, ಅವುಗಳ ಮೇಲಿದ್ದ ಕೊಬ್ಬು ಇವುಗಳನ್ನೂ ಬಲದೊಡೆಯನ್ನೂ
Kannada Bible (KNCL) BSI 2016
ಹಾಗೆಯೆ ಮೋಶೆ ಆ ಟಗರಿನ ಕೊಬ್ಬನ್ನು, ಅಂದರೆ ಬಾಲದ ಕೊಬ್ಬು, ಕರುಳುಗಳ ಸುತ್ತಲಿನ ಕೊಬ್ಬು, ಕಾಳಿಜದ ಹತ್ತಿರವಿರುವ ಕೊಬ್ಬು, ಮೂತ್ರಪಿಂಡಗಳು ಅವುಗಳ ಮೇಲಿರುವ ಕೊಬ್ಬು, ಇವುಗಳನ್ನು ಮತ್ತು ಬಲದೊಡೆಯನ್ನು ತೆಗೆದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲದೊಡೆಯನ್ನೂ ತೆಗೆದುಕೊಂಡನು.