Leviticus 8:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಮೋಶೆಯು ಅವೆಲ್ಲವುಗಳನ್ನು ಆರೋನನ ಮತ್ತು ಅವನ ಪುತ್ರರ ಕೈಗಳಲ್ಲಿ ಇಟ್ಟನು. ಮೋಶೆಯು ತುಂಡುಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅವೆಲ್ಲವುಗಳನ್ನು ಆರೋನನ ಮತ್ತು ಅವನ ಮಕ್ಕಳ ಕೈಗಳಿಗೆ ಕೊಟ್ಟು ನೈವೇದ್ಯವೆಂದು ಸೂಚಿಸುವುದಕ್ಕೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ನಿವಾಳಿಸಿದನು.
Kannada BSI Bible 2016
ಅದೆಲ್ಲವನ್ನು ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಕರ್ತನ ಮುಂದೆ ಅಲಾ ್ಲಡುವ ಸಮರ್ಪಣೆಗಾಗಿ ಅವುಗಳನ್ನು ಅಲ್ಲಾಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲವುಗಳನ್ನು ಆರೋನನ ಮತ್ತು ಅವನ ಮಕ್ಕಳ ಕೈಗಳಿಗೆ ಕೊಟ್ಟು ನೈವೇದ್ಯವೆಂದು ಸೂಚಿಸುವದಕ್ಕೆ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು.
Kannada Bible (KNCL) BSI 2016
ಇವೆಲ್ಲವುಗಳನ್ನು ಆರೋನನ ಮತ್ತು ಅವನ ಮಕ್ಕಳ ಕೈಗಳಿಗೆ ಕೊಟ್ಟು ನೈವೇದ್ಯವೆಂದು ಸೂಚಿಸುವುದಕ್ಕಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೆಲ್ಲವನ್ನೂ ಆರೋನನ ಕೈಗಳಿಗೆ ಮತ್ತು ಅವನ ಪುತ್ರರ ಕೈಗಳಿಗೆ ಕೊಟ್ಟು, ಯೆಹೋವ ದೇವರ ಮುಂದೆ ಸಮರ್ಪಣೆಗಾಗಿ ಅವುಗಳನ್ನು ನೈವೇದ್ಯ ಮಾಡಿಸಿದನು.