Leviticus 8:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಎದೆಯ ಭಾಗವನ್ನು ತೆಗೆದುಕೊಂಡು ಯೆಹೋವನ ಮುಂದೆ ನೈವೇದ್ಯವಾಗಿ ನಿವಾಳಿಸಿದನು. ಅದು ಯಾಜಕರನ್ನು ನೇಮಿಸುವುದಕ್ಕಾಗಿ ಅರ್ಪಿಸಲ್ಪಟ್ಟ ಟಗರಿನಲ್ಲಿ ಮೋಶೆಯ ಪಾಲಾಗಿತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಅದರ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. ಯೆಹೋವನು ಆಜ್ಞಾಪಿಸಿದಂತೆ ಆ ಪಟ್ಟಾಭಿಷೇಕಯಜ್ಞದ ಟಗರಿನಲ್ಲಿ ಆ ಎದೆಯ ಭಾಗವೇ ಮೋಶೆಗೆ ಸಲ್ಲಬೇಕಾದದ್ದು.
Kannada BSI Bible 2016
ಮೋಶೆಯು ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಸನ್ನಿಧಿ ಯಲ್ಲಿ ಆಡಿಸುವ ಸಮರ್ಪಣೆಗಾಗಿ ಅದನ್ನು ಆಡಿಸಿ ದನು; ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿ ಷ್ಠಿತ ಟಗರು ಮೋಶೆಯ ಪಾಲಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಅದರ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. ಯೆಹೋವನು ಆಜ್ಞಾಪಿಸಿದಂತೆ ಆ ಪಟ್ಟಾಭಿಷೇಕಯಜ್ಞದ ಟಗರಿನಲ್ಲಿ ಆ ಎದೆಯ ಭಾಗವೇ ಮೋಶೆಗೆ ಸಲ್ಲಬೇಕಾದದ್ದು.
Kannada Bible (KNCL) BSI 2016
ಮೋಶೆ ಬಲಿಪ್ರಾಣಿಯ ಎದೇಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಿದನು. ಸರ್ವೇಶ್ವರನ ಆಜ್ಞಾನುಸಾರ ಆ ಯಾಜಕಾಭಿಷೇಕ ಬಲಿಯ ಟಗರಿನ ಎದೆಯ ಭಾಗ ಮೋಶೆಗೆ ಸಲ್ಲತಕ್ಕದಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ನಿವಾಳಿಸಿದನು. ಏಕೆಂದರೆ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿಷ್ಠಿತ ಟಗರು ಮೋಶೆಯ ಪಾಲಾಗಿತ್ತು.