Leviticus 8:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಸ್ವಲ್ಪ ಅಭಿಷೇಕತೈಲವನ್ನು ಮತ್ತು ವೇದಿಕೆಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮೇಲೆ ಮತ್ತು ಅವನ ಯಾಜಕವಸ್ತ್ರದ ಮೇಲೆ ಚಿಮಿಕಿಸಿದನು; ಆರೋನನ ಜೊತೆ ಇದ್ದ ಅವನ ಪುತ್ರರ ಮೇಲೆ ಮತ್ತು ಅವರ ಬಟ್ಟೆಗಳ ಮೇಲೆ ಚಿಮಿಕಿಸಿದನು. ಹೀಗೆ ಮೋಶೆಯು ಆರೋನನನ್ನೂ ಅವನ ಯಾಜಕವಸ್ತ್ರವನ್ನೂ ಅವನ ಪುತ್ರರನ್ನೂ ಅವರ ಯಾಜಕ ವಸ್ತ್ರಗಳನ್ನೂ ಪವಿತ್ರಗೊಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮೋಶೆ ಅಭಿಷೇಕತೈಲದಲ್ಲಿ ಮತ್ತು ಯಜ್ಞವೇದಿಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಹಾಗೂ ಅವನ ವಸ್ತ್ರಗಳ ಮೇಲೆಯೂ, ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಿದನು. ಹೀಗೆ ಆರೋನನನ್ನು ಅವನ ವಸ್ತ್ರಗಳನ್ನು, ಅವನ ಮಕ್ಕಳನ್ನು ಮತ್ತು ಅವರ ವಸ್ತ್ರಗಳನ್ನು ಪ್ರತಿಷ್ಠಿಸಿದನು.
Kannada BSI Bible 2016
ಮೋಶೆಯು ಅಭಿಷೇಕ ತೈಲವನ್ನೂ ಯಜ್ಞ ವೇದಿಯ ಮೇಲಿರುವ ರಕ್ತವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ಉಡುಪುಗಳ ಮೇಲೆ ಯೂ ಅವನೊಂದಿಗೆ ಅವನ ಕುಮಾರರ ಮೇಲೆಯೂ ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು ಮತ್ತು ಆರೋನನನ್ನೂ ಅವನ ಉಡುಪುಗಳನ್ನೂ ಅವನೊಂದಿಗೆ ಅವನ ಕುಮಾರರನ್ನೂ ಅವರ ಉಡುಪು ಗಳನ್ನೂ ಪವಿತ್ರಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮೋಶೆ ಅಭಿಷೇಕತೈಲದಲ್ಲಿಯೂ ಯಜ್ಞವೇದಿಯ ಮೇಲಿದ್ದ ರಕ್ತದಲ್ಲಿಯೂ ಸ್ವಲ್ಪ ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿವಿುಕಿಸಿದನು. ಹೀಗೆ ಆರೋನನನ್ನೂ ಅವನ ವಸ್ತ್ರಗಳನ್ನೂ ಅವನ ಮಕ್ಕಳನ್ನೂ ಅವರ ವಸ್ತ್ರಗಳನ್ನೂ ಪ್ರತಿಷ್ಠಿಸಿದನು.
Kannada Bible (KNCL) BSI 2016
ಬಳಿಕ ಮೋಶೆ ಅಭಿಷೇಕ ಎಣ್ಣೆಯಿಂದಲೂ ಬಲಿಪೀಠದ ಮೇಲಿದ್ದ ರಕ್ತದಿಂದಲೂ ಸ್ವಲ್ಪ ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೂ ಚಿಮುಕಿಸಿದನು. ಹೀಗೆ ಆರೋನನನ್ನೂ ಅವನ ಮಕ್ಕಳನ್ನೂ ಪ್ರತಿಷ್ಠಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಅಭಿಷೇಕ ತೈಲವನ್ನೂ, ಬಲಿಪೀಠದ ಮೇಲಿರುವ ರಕ್ತವನ್ನೂ ತೆಗೆದುಕೊಂಡು, ಆರೋನನ ಮೇಲೆಯೂ, ಅವನ ಉಡುಪುಗಳ ಮೇಲೆಯೂ ಅವನೊಂದಿಗೆ ಅವನ ಪುತ್ರರ ಮೇಲೆಯೂ, ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು. ಆರೋನನನ್ನೂ, ಅವನ ಉಡುಪುಗಳನ್ನೂ, ಅವನೊಂದಿಗೆ ಅವನ ಪುತ್ರರನ್ನೂ, ಅವನ ಪುತ್ರರ ಉಡುಪುಗಳನ್ನೂ ಪವಿತ್ರ ಮಾಡಿದನು.