Leviticus 8:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕರಾಗಿ ಪ್ರತಿಷ್ಠಿಸುವ ಆಚಾರವಿಧಿಯು ಏಳು ದಿನಗಳವರೆಗೆ ಇರುವುದು. ಆ ಸಮಯ ಮುಗಿಯುವವರೆಗೆ ನೀವು ದೇವದರ್ಶನಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಈ ನಿಮ್ಮ ಯಾಜಕೋದ್ಯೋಗದ ದೀಕ್ಷೆಯು ಪೂರೈಸುವುದಕ್ಕೆ ಏಳು ದಿನಗಳು ಆಗುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲಿನ ಆಚೆಗೆ ಹೋಗಬಾರದು.
Kannada BSI Bible 2016
ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಯ ವರೆಗೆ ಅಂದರೆ ಏಳು ದಿವಸಗಳ ವರೆಗೆ ನೀವು ಸಭೆಯ ಗುಡಾರದ ಬಾಗಲಿನಿಂದ ಹೊರಗೆ ಹೋಗಬಾರದು; ಆತನು ನಿಮ್ಮನ್ನು ಏಳು ದಿವಸಗಳ ವರೆಗೆ ಪ್ರತಿಷ್ಠಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಈ ನಿಮ್ಮ ಯಾಜಕೋದ್ಯೋಗದ ದೀಕ್ಷೆಯು ಪೂರೈಸುವದಕ್ಕೆ ಏಳು ದಿವಸ ಹಿಡಿಯುವದಾದದರಿಂದ ಆವರೆಗೂ ನೀವು ದೇವದರ್ಶನದ ಗುಡಾರದ ಬಾಗಲಿನ ಆಚೆಗೆ ಹೋಗಬಾರದು.
Kannada Bible (KNCL) BSI 2016
ಇದಲ್ಲದೆ, ಈ ನಿಮ್ಮ ಯಾಜಕ ಸೇವಾವೃತ್ತಿಯ ದೀಕ್ಷೆಯನ್ನು ಪೂರೈಸುವುದಕ್ಕೆ ಏಳು ದಿವಸ ಹಿಡಿಯುವುದರಿಂದ ಆವರೆಗೂ ನೀವು ದೇವದರ್ಶನದ ಗುಡಾರದ ಬಾಗಿಲಿನ ಆಚೆಗೆ ಹೋಗಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಗೊಳ್ಳುವುದಕ್ಕೆ ಏಳು ದಿವಸ ಹಿಡಿಯುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲಿನಿಂದ ಹೊರಗೆ ಹೋಗಬಾರದು.