Leviticus 8:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಏಳು ದಿನಗಳು ಹಗಲುರಾತ್ರಿ ದೇವದರ್ಶನಗುಡಾರದ ಬಾಗಿಲಿನಲ್ಲಿ ಇರಬೇಕು. ನೀವು ಯೆಹೋವನ ಆಜ್ಞೆಗಳಿಗೆ ವಿಧೇಯರಾಗದಿದ್ದರೆ ಸಾಯುವಿರಿ! ಯೆಹೋವನು ಆ ಆಜ್ಞೆಗಳನ್ನು ನನಗೆ ಕೊಟ್ಟನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ, ಹೀಗೆಯೇ ನನಗೆ ಅಪ್ಪಣೆಯಾಗಿದೆ” ಎಂದು ಹೇಳಿದನು.
Kannada BSI Bible 2016
ಆದದರಿಂದ ಏಳು ದಿನ ಗಳ ವರೆಗೆ ನೀವು ಸಾಯದಂತೆ ಹಗಲು ರಾತ್ರಿ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಆಜ್ಞೆ ಯನ್ನು ಕೈಕೊಳ್ಳಬೇಕು. ಹೀಗೆಯೇ ನನಗೆ ಅಪ್ಪಣೆ ಯಾಗಿದೆ.ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನದ ಗುಡಾರದ ಬಾಗಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ; ಹೀಗೆಯೇ ನನಗೆ ಅಪ್ಪಣೆಯಾಯಿತು.
Kannada Bible (KNCL) BSI 2016
ಆದುದರಿಂದ ನೀವು ಆ ಆಜ್ಞೆಯ ಮೇರೆಗೆ ಏಳು ದಿನಗಳೂ ಹಗಲಿರುಳು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ. ಇದು ಸರ್ವೇಶ್ವರನ ಆಜ್ಞೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಏಳು ದಿನಗಳವರೆಗೆ ನೀವು ಸಾಯದಂತೆ ಹಗಲೂ ರಾತ್ರಿ ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಆಜ್ಞೆಯನ್ನು ಕೈಗೊಳ್ಳಬೇಕು. ಏಕೆಂದರೆ ಹಾಗೆಯೇ ನನಗೆ ಅಪ್ಪಣೆಯಾಗಿದೆ,” ಎಂದನು.