Leviticus 9:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆರೋನನು ಪಾಪಪರಿಹಾರಕ ಯಜ್ಞಪಶುವಿನ ಕೊಬ್ಬನ್ನು, ಮೂತ್ರಪಿಂಡಗಳನ್ನು ಮತ್ತು ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನು ತೆಗೆದುಕೊಂಡನು. ಅವನು ಆ ವಸ್ತುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದೋಷಪರಿಹಾರಕ ಯಜ್ಞಪಶುವಿನ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯಜ್ಞವೇದಿಯ ಮೇಲೆ ಹೋಮಮಾಡಿದನು.
Kannada BSI Bible 2016
ಆದರೆ ಪಾಪದ ಬಲಿಯ ಕೊಬ್ಬು, ಮೂತ್ರಜನಕಾಂಗಗಳು ಕಲಿಜದ ಮೇಲಿನ ಪೊರೆ ಇವುಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿ ದ್ದಂತೆಯೇ ಅವನು ಯಜ್ಞವೇದಿಯ ಮೇಲೆ ಸುಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದೋಷಪರಿಹಾರಕಯಜ್ಞಪಶುವಿನ ಕೊಬ್ಬನ್ನೂ ಹುರುಳಿಕಾಯಿಗಳನ್ನೂ ಕಾಳಿಜದ ಹತ್ತಿರವಿರುವ ಕೊಬ್ಬನ್ನೂ ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯಜ್ಞವೇದಿಯ ಮೇಲೆ ಹೋಮಮಾಡಿದನು.
Kannada Bible (KNCL) BSI 2016
ದೋಷಪರಿಹಾರಕ ಬಲಿಪ್ರಾಣಿಯ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಾಳಿಜದ ಹತ್ತಿರವಿರುವ ಕೊಬ್ಬನ್ನು, ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ, ಬಲಿಪೀಠದ ಮೇಲೆ ಹೋಮಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಪಾಪ ಪರಿಹಾರದ ಬಲಿಯ ಕೊಬ್ಬು, ಮೂತ್ರಪಿಂಡಗಳು ಮತ್ತು ಕಾಳಿಜದ ಹತ್ತಿರವಿರುವ ಕೊಬ್ಬು, ಇವುಗಳನ್ನು ಅವನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ, ಬಲಿಪೀಠದ ಮೇಲೆ ಸುಟ್ಟನು.