Leviticus 9:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಆರೋನನು ಸರ್ವಾಂಗಹೋಮದ ಪಶುವನ್ನು ವಧಿಸಿದನು. ಆರೋನನ ಪುತ್ರರು ರಕ್ತವನ್ನು ಆರೋನನ ಬಳಿಗೆ ತಂದರು. ಆರೋನನು ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಸರ್ವಾಂಗಹೋಮ ಪಶುವನ್ನು ವಧಿಸಿದನು. ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ತಂದು ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಯ ಸುತ್ತಲೂ ಎರಚಿದನು.
Kannada BSI Bible 2016
ಅವನು ದಹನ ಬಲಿಯನ್ನು ವಧಿಸಿದಾಗ ಆರೋನನ ಕುಮಾರರು ಅವನಿಗೆ ರಕ್ತವನ್ನು ತಂದು ಕೊಟ್ಟರು, ಅದನ್ನು ಅವನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಸರ್ವಾಂಗಹೋಮಪಶುವನ್ನು ವಧಿಸಿದನು. ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ತಂದು ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ಸುತ್ತಲೂ ಎರಚಿದನು.
Kannada Bible (KNCL) BSI 2016
ತರುವಾಯ ದಹನಬಲಿಯ ಪ್ರಾಣಿಯನ್ನು ವಧಿಸಿಬಿಟ್ಟನು. ಆರೋನನ ಮಕ್ಕಳು ಅದರ ರಕ್ತವನ್ನು ತಂದು ಅವನಿಗೆ ಒಪ್ಪಿಸಿದರು. ಅವನು ಅದನ್ನು ಬಲಿಪೀಠದ ಸುತ್ತಲು ಚಿಮುಕಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ದಹನಬಲಿಯನ್ನು ವಧಿಸಿದಾಗ, ಆರೋನನ ಪುತ್ರರು ಅವನಿಗೆ ರಕ್ತವನ್ನು ತಂದು ಕೊಟ್ಟರು. ಅದನ್ನು ಅವನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಿದನು.