Leviticus 9:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆರೋನನ ಪುತ್ರರು ಸರ್ವಾಂಗಹೋಮದ ಪಶುವಿನ ಮಾಂಸದ ತುಂಡುಗಳನ್ನು ಮತ್ತು ತಲೆಯನ್ನು ಆರೋನನಿಗೆ ಕೊಟ್ಟರು. ಬಳಿಕ ಆರೋನನು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಆ ಪಶುವಿನ ಮಾಂಸಭಾಗಗಳನ್ನು ಮತ್ತು ತಲೆಯನ್ನು ಒಂದೊಂದಾಗಿ ಒಪ್ಪಿಸಿದಾಗ ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು.
Kannada BSI Bible 2016
ಅವರು ಅವನಿಗೆ ದಹನಬಲಿಯನ್ನೂ ಅವುಗಳ ತುಂಡುಗಳೊಂದಿಗೆ ತಲೆಯನ್ನೂ ತಂದುಕೊಡಲು ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಸುಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆ ಪಶುವಿನ ಮಾಂಸ ಖಂಡಗಳನ್ನೂ ತಲೆಯನ್ನೂ ಒಂದೊಂದಾಗಿ ಒಪ್ಪಿಸಿದಾಗ ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು.
Kannada Bible (KNCL) BSI 2016
ಅವರು ಆ ಪ್ರಾಣಿಯ ಮಾಂಸಖಂಡಗಳನ್ನೂ ತಲೆಯನ್ನೂ ಒಂದೊಂದಾಗಿ ಒಪ್ಪಿಸಿದಾಗ ಅವನು ಅವುಗಳನ್ನು ಬಲಿಪೀಠದ ಮೇಲೆ ಹೋಮಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅವನಿಗೆ ದಹನಬಲಿಯನ್ನೂ ಅವುಗಳ ತುಂಡುಗಳೊಂದಿಗೆ ತಲೆಯನ್ನೂ ತಂದು ಕೊಡಲು, ಅವನು ಅವುಗಳನ್ನು ಬಲಿಪೀಠದ ಮೇಲೆ ಸುಟ್ಟನು.