Leviticus 9:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆರೋನನು ಸರ್ವಾಂಗಹೋಮದ ಪಶುವಿನ ಒಳಗಿನ ಭಾಗಗಳನ್ನೂ ಕಾಲುಗಳನ್ನೂ ತೊಳೆದು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ತೊಳೆದು ಯಜ್ಞವೇದಿಯಲ್ಲಿ ಸರ್ವಾಂಗಹೋಮದ್ರವ್ಯದ ಮೇಲಿಟ್ಟು ಹೋಮಮಾಡಿದನು.
Kannada BSI Bible 2016
ಅವನು ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅವುಗಳನ್ನು ಯಜ್ಞವೇದಿಯ ಮೇಲಿನ ದಹನಬಲಿಯ ಮೇಲೆ ಸುಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳಿಸಿ ಯಜ್ಞವೇದಿಯಲ್ಲಿ ಸರ್ವಾಂಗಹೋಮದ್ರವ್ಯದ ಮೇಲಿಟ್ಟು ಹೋಮಮಾಡಿದನು.
Kannada Bible (KNCL) BSI 2016
ಅದರ ಕರುಳುಗಳನ್ನೂ, ಕಾಲುಗಳನ್ನೂ ತೊಳೆಯಿಸಿ, ಬಲಿಪೀಠದಲ್ಲಿ ದಹನ ಬಲಿದ್ರವ್ಯದ ಮೇಲಿಟ್ಟು ಹೋಮಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಕರುಳುಗಳನ್ನು ಮತ್ತು ಕಾಲುಗಳನ್ನು ತೊಳೆದು, ಅವುಗಳನ್ನು ದಹನಬಲಿಯ ಜೊತೆ ಮೇಲಿನ ಬಲಿಪೀಠದ ಮೇಲೆ ಸುಟ್ಟನು.