Leviticus 9:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತರುವಾಯ ಆರೋನನು ಜನರು ಅರ್ಪಿಸುವ ಪಶುಗಳನ್ನು ತರಿಸಿದನು. ಅವನು ಜನರಿಗಾಗಿ ಪಾಪಪರಿಹಾರಕ ಯಜ್ಞಕ್ಕಾಗಿ ಹೋತವನ್ನು ವಧಿಸಿದನು. ಅವನು ಮೊದಲಿನ ಪಶುವನ್ನು ಸಮರ್ಪಿಸಿದ ರೀತಿಯಲ್ಲಿ ಪಾಪಪರಿಹಾರಕ್ಕಾಗಿ ಹೋತವನ್ನು ಸಮರ್ಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಜನಸಮೂಹವು ಸಮರ್ಪಿಸುವ ಪಶುಗಳನ್ನು ಆರೋನನು ತರಿಸಿ ಅವುಗಳಲ್ಲಿ ದೋಷಪರಿಹಾರಕ ಹೋತವನ್ನು ಮೊದಲನೆಯ ಪಶುವಿನಂತೆ ವಧಿಸಿ ಅವರಿಗೋಸ್ಕರ ದೋಷಪರಿಹಾರಕ್ಕಾಗಿ ಅದನ್ನು ಸಮರ್ಪಿಸಿದನು.
Kannada BSI Bible 2016
ಅವನು ಜನರ ಬಲಿಯನ್ನು ತಂದು, ಮೇಕೆಯನ್ನು ತೆಗೆದುಕೊಂಡು, ಜನರಿಗಾಗಿ ಪಾಪ ಬಲಿಯಾಗಿರು ವದನ್ನು ವಧಿಸಿ, ಮೊದಲನೆಯದರ ಹಾಗೆ ಪಾಪಕ್ಕಾಗಿ ಅದನ್ನು ಸಮರ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಜನಸಮೂಹವು ಸಮರ್ಪಿಸುವ ಪಶುಗಳನ್ನು ಆರೋನನು ತರಿಸಿ ಅವುಗಳಲ್ಲಿ ದೋಷಪರಿಹಾರಕವಾದ ಹೋತವನ್ನು ಮೊದಲನೆಯ ಪಶುವಿನಂತೆ ವಧಿಸಿ ಅವರಿಗೋಸ್ಕರ ದೋಷಪರಿಹಾರಕ್ಕಾಗಿ ಸಮರ್ಪಿಸಿದನು.
Kannada Bible (KNCL) BSI 2016
ಅದಾದ ಮೇಲೆ ಜನರು ಸಮರ್ಪಿಸಿದ ಪ್ರಾಣಿಗಳನ್ನು ಆರೋನನು ತರಿಸಿ ಅವುಗಳಲ್ಲಿ ದೋಷಪರಿಹಾರಕವಾದ ಹೋತವನ್ನು ಮೊದಲನೆಯ ಬಲಿಪ್ರಾಣಿಯಾಗಿ ವಧಿಸಿ ಜನರ ದೋಷಪರಿಹಾರಾರ್ಥವಾಗಿ ಸಮರ್ಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಾದ ಮೇಲೆ ಆರೋನನು ಜನರಿಗಾಗಿ ಅರ್ಪಿಸಿದ ಬಲಿಯನ್ನು ತಂದು, ಹೋತವನ್ನು ತೆಗೆದುಕೊಂಡು, ಜನರಿಗಾಗಿ ಪಾಪ ಪರಿಹಾರದ ಬಲಿಯಾಗಿರುವುದನ್ನು ವಧಿಸಿ, ಮೊದಲನೆಯದರ ಹಾಗೆ ಅದನ್ನು ಸಮರ್ಪಿಸಿದನು.