Leviticus 9:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆರೋನನು ಧಾನ್ಯನೈವೇದ್ಯವನ್ನು ಯಜ್ಞವೇದಿಕೆಯ ಬಳಿಗೆ ತಂದನು. ಅವನು ಒಂದು ಹಿಡಿ ಧಾನ್ಯವನ್ನು ತೆಗೆದುಕೊಂಡು ದಿನಂಪ್ರತಿ ಹೊತ್ತಾರೆಯ ವೇಳೆಯಲ್ಲಿ ಅರ್ಪಿಸುವ ಯಜ್ಞವಲ್ಲದೆ ಇದನ್ನೂ ಕೂಡ ಅರ್ಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ತಂದ ಧಾನ್ಯನೈವೇದ್ಯ ದ್ರವ್ಯಗಳಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು, ಹೊತ್ತಾರೆಯ ಸರ್ವಾಂಗಹೋಮದ ಸಂಗಡ ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು.
Kannada BSI Bible 2016
ಅವನು ಆಹಾರ ಸಮರ್ಪಣೆ ಯನ್ನು ತಂದು ಅದರಲ್ಲಿ ಒಂದು ಹಿಡಿ ತೆಗೆದುಕೊಂಡು ಯಜ್ಞವೇದಿಯ ಮೇಲೆ ಬೆಳಗಿನ ದಹನಬಲಿಯ ಪಕ್ಕದಲ್ಲಿ ಅದನ್ನು ಸುಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ತಂದ ನೈವೇದ್ಯದ್ರವ್ಯಗಳಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಹೊತ್ತಾರೆಯ ಸರ್ವಾಂಗ ಹೋಮವನ್ನಲ್ಲದೆ ಅದನ್ನೂ ಯಜ್ಞವೇದಿಯ ಮೇಲೆ ಹೋಮಮಾಡಿದನು.
Kannada Bible (KNCL) BSI 2016
ಜನರು ತಂದ ನೈವೇದ್ಯ ದ್ರವ್ಯಗಳಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಬೆಳಿಗ್ಗೆಯ ದಹನಬಲಿಯ ಜೊತೆಗೆ ಅದನ್ನು ಪೀಠದ ಮೇಲೆ ಹೋಮಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಧಾನ್ಯ ಸಮರ್ಪಣೆಯ ಬಲಿಯನ್ನು ತಂದು, ಅದರಲ್ಲಿ ಒಂದು ಹಿಡಿ ತೆಗೆದುಕೊಂಡು, ಬಲಿಪೀಠದ ಮೇಲೆ ಬೆಳಗಿನ ದಹನಬಲಿ ಯಜ್ಞದ ಬಳಿಯಲ್ಲಿ ಅದನ್ನು ಹೋಮ ಮಾಡಿದನು.