Leviticus 9:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆರೋನನು ಜನರಿಗಾಗಿ ಸಮಾಧಾನಯಜ್ಞವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಪುತ್ರರು ರಕ್ತವನ್ನು ಆರೋನನ ಬಳಿಗೆ ತಂದರು. ಆರೋನನು ಈ ರಕ್ತವನ್ನು ಯಜ್ಞವೇದಿಕೆಯ ಸುತ್ತಲೂ ಚಿಮಿಕಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಜನರಿಗೋಸ್ಕರ ಸಮಾಧಾನಯಜ್ಞಕ್ಕಾಗಿ ನೇಮಕವಾದ ಹೋರಿಯನ್ನು ಮತ್ತು ಟಗರನ್ನು ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಲಾಗಿ ಅವನು ಅದನ್ನು ಯಜ್ಞವೇದಿಯ ಸುತ್ತಲೂ ಎರಚಿದನು.
Kannada BSI Bible 2016
ಅವನು ಜನರಿಗಾಗಿ ಹೋರಿಯನ್ನೂ ಟಗರನ್ನೂ ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು; ಆರೋನನ ಕುಮಾರರು ರಕ್ತವನ್ನು ಅವನ ಬಳಿಗೆ ತರಲು ಅವನು ಅದನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಜನರಿಗೋಸ್ಕರ ಸಮಾಧಾನಯಜ್ಞಕ್ಕಾಗಿ ನೇಮಕವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಲಾಗಿ ಅವನು ಅದನ್ನು ಯಜ್ಞವೇದಿಗೆ ಸುತ್ತಲೂ ಎರಚಿದನು.
Kannada Bible (KNCL) BSI 2016
ಅನಂತರ ಜನರ ಪರವಾಗಿ ಶಾಂತಿಸಮಾಧಾನದ ಬಲಿದಾನಕ್ಕಾಗಿ ನೇಮಕವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಿದಾಗ, ಅವನು ಅದನ್ನು ಬಲಿಪೀಠದ ಸುತ್ತಲೂ ಚಿಮುಕಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಜನರಿಗಾಗಿದ್ದ ಹೋರಿ ಮತ್ತು ಟಗರನ್ನು ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು. ಆರೋನನ ಪುತ್ರರು ರಕ್ತವನ್ನು ಅವನ ಬಳಿಗೆ ತರಲು, ಅದನ್ನು ಅವನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಿದನು.