Leviticus 9:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ಆರೋನನಿಗೆ ಹೀಗೆಂದನು; “ಒಂದು ಎಳೆಹೋರಿಯನ್ನೂ ಒಂದು ಟಗರನ್ನೂ ತೆಗೆದುಕೊ. ಆ ಪಶುಗಳಲ್ಲಿ ಏನೂ ದೋಷವಿರಬಾರದು. ಹೋರಿಯನ್ನು ಪಾಪಪರಿಹಾರಕ ಯಜ್ಞವಾಗಿಯೂ ಟಗರನ್ನು ಸರ್ವಾಂಗಹೋಮವಾಗಿಯೂ ಯೆಹೋವನಿಗೆ ಸಮರ್ಪಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆರೋನನಿಗೆ, “ನೀನು ದೋಷಪರಿಹಾರ ಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನು ಮತ್ತು ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಗರನ್ನು ನಿನಗೋಸ್ಕರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.
Kannada BSI Bible 2016
ಅವನು ಆರೋನನಿಗೆ ಹೇಳಿದ್ದೇನಂದರೆ--ಪಾಪದ ಬಲಿಗಾಗಿ ಒಂದು ಎಳೆಯ ಕರುವನ್ನೂ ದಹನ ಬಲಿಗಾಗಿ ದೋಷವಿಲ್ಲದ ಟಗರನ್ನೂ ನೀನು ತೆಗೆದು ಕೊಂಡು ಅವುಗಳನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ದೋಷಪರಿಹಾರಕಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನೂ ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಗರನ್ನೂ ನಿನಗೋಸ್ಕರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.
Kannada Bible (KNCL) BSI 2016
ಆರೋನನಿಗೆ, “ನೀನು ಪರಿಹಾರಕ ಬಲಿದಾನಕ್ಕಾಗಿ ಕಳಂಕರಹಿತವಾದ ಹೋರಿಕರುವನ್ನು ಮತ್ತು ದಹನಬಲಿಗಾಗಿ ಕಳಂಕರಹಿತವಾದ ಟಗರನ್ನು ತೆಗೆದುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ನಿನಗೋಸ್ಕರ ಸಮರ್ಪಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಆರೋನನಿಗೆ, “ನೀನು ಪಾಪ ಪರಿಹಾರದ ಬಲಿಗಾಗಿ ಒಂದು ಎಳೆಯ ಕರುವನ್ನೂ ಮತ್ತು ದಹನಬಲಿಗಾಗಿ ಕಳಂಕರಹಿತ ಟಗರನ್ನೂ ತೆಗೆದುಕೊಂಡು ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸು.