Leviticus 9:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತರುವಾಯ ಆರೋನನು ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿದನು. ಆರೋನನು ಪಾಪಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಮತ್ತು ಸಮಾಧಾನಯಜ್ಞವನ್ನೂ ಅರ್ಪಿಸಿ ಮುಗಿಸಿದ ನಂತರ ಯಜ್ಞವೇದಿಕೆಯಿಂದ ಕೆಳಗಿಳಿದು ಬಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರೋನನು ಆ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞಗಳನ್ನು ಸಮರ್ಪಿಸಿದ ನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿ ಇಳಿದು ಬಂದನು.
Kannada BSI Bible 2016
ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿ ಪಾಪದ ಬಲಿಯನ್ನೂ ದಹನಬಲಿಯನ್ನೂ ಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರೋನನು ಆ ದೋಷಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿ ಇಳಿದು ಬಂದನು.
Kannada Bible (KNCL) BSI 2016
ಆರೋನನು ಆ ದೋಷಪರಿಹಾರಕ ಬಲಿಯನ್ನೂ ದಹನಬಲಿಯನ್ನೂ ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿದನು. ಆಮೇಲೆ ಬಲಿಪೀಠದಿಂದ ಇಳಿದು ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು. ಪಾಪ ಪರಿಹಾರದ ಬಲಿಯನ್ನೂ ದಹನಬಲಿಯನ್ನೂ ಮತ್ತು ಸಮಾಧಾನದ ಬಲಿಯನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು.