Leviticus 9:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ಬಳಿಯಿಂದ ಬೆಂಕಿಯು ಬಂದು ವೇದಿಕೆಯ ಮೇಲಿದ್ದ ಸರ್ವಾಂಗಹೋಮವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿದಾಗ, ಅವರು ಆನಂದದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ, ಅಡ್ಡಬಿದ್ದು ನಮಸ್ಕರಿಸಿದರು.
Kannada BSI Bible 2016
ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು.
Kannada Bible (KNCL) BSI 2016
ಸರ್ವೇಶ್ವರನ ಸನ್ನಿಧಿಯಿಂದ ಅಗ್ನಿ ಹೊರಟು ಬಲಿಪೀಠದ ಮೇಲಿದ್ದ ದಹನಬಲಿದ್ರವ್ಯವನ್ನೂ, ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರು ಅದನ್ನು ಕಂಡು ಜಯ ಜಯಕಾರ ಮಾಡಿದರು; ಅಡ್ಡಬಿದ್ದು ನಮಸ್ಕರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಲ್ಲಿ ಬೆಂಕಿಯು ಯೆಹೋವ ದೇವರ ಸನ್ನಿಧಿಯಿಂದ ಬಂದು, ಬಲಿಪೀಠದ ಮೇಲಿದ್ದ ದಹನಬಲಿಯನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಇದನ್ನು ಜನರೆಲ್ಲರೂ ಕಂಡಾಗ, ಅವರು ಆನಂದದಿಂದ ಜಯಘೋಷ ಮಾಡಿ ಅಡ್ಡಬಿದ್ದರು.