Leviticus 9:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಜನರೆಲ್ಲರೂ ದೇವದರ್ಶನಗುಡಾರಕ್ಕೆ ಬಂದರು. ಮೋಶೆಯು ಆಜ್ಞಾಪಿಸಿದ ವಸ್ತುಗಳನ್ನು ಅವರು ತಂದರು. ಎಲ್ಲಾ ಜನರು ಯೆಹೋವನ ಸನ್ನಿಧಿಯಲ್ಲಿ ನಿಂತರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಆಜ್ಞಾಪಿಸಿದ ಮೇರೆಗೆ ಅವರು ಅವುಗಳನ್ನೆಲ್ಲಾ ದೇವದರ್ಶನ ಗುಡಾರದ ಹತ್ತಿರಕ್ಕೆ ತಂದರು. ಸರ್ವಸಮೂಹದವರೆಲ್ಲರೂ ಹತ್ತಿರಕ್ಕೆ ಬಂದು ಯೆಹೋವನ ಸನ್ನಿಧಿಯಲ್ಲಿ ನಿಂತರು.
Kannada BSI Bible 2016
ಮೋಶೆಯು ಆಜ್ಞಾಪಿಸಿದವುಗಳನ್ನು ಅವರು ಸಭೆಯ ಗುಡಾರದ ಮುಂದೆ ತಂದರು; ಸಭೆಯೆಲ್ಲವೂ ಹತ್ತಿರ ಬಂದು ಕರ್ತನ ಮುಂದೆ ನಿಂತಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಆಜ್ಞಾಪಿಸಿದ ಮೇರೆಗೆ ಅವರು ದೇವದರ್ಶನದ ಗುಡಾರದ ಹತ್ತಿರಕ್ಕೆ ತಂದರು. ಸಮೂಹದವರೆಲ್ಲರೂ ಹತ್ತಿರಕ್ಕೆ ಬಂದು ಯೆಹೋವನ ಸನ್ನಿಧಿಯಲ್ಲಿ ನಿಂತಿರಲಾಗಿ ಮೋಶೆ ಅವರಿಗೆ -
Kannada Bible (KNCL) BSI 2016
ಮೋಶೆಯ ಆಜ್ಞಾನುಸಾರ ಅವರು ಕಾಣಿಕೆಗಳನ್ನೆಲ್ಲ ದೇವದರ್ಶನದ ಗುಡಾರದ ಬಳಿಗೆ ತಂದರು. ಇಸ್ರಯೇಲ್ ಸಮಾಜದವರೆಲ್ಲರು ಹತ್ತಿರಕ್ಕೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ನಿಂತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಮೋಶೆಯು ಆಜ್ಞಾಪಿಸಿದವುಗಳನ್ನು ದೇವದರ್ಶನದ ಗುಡಾರದ ಮುಂದೆ ತಂದರು. ಸಮೂಹವೆಲ್ಲವೂ ಹತ್ತಿರ ಬಂದು ಯೆಹೋವ ದೇವರ ಮುಂದೆ ನಿಂತಿತು.