Leviticus 9:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ಆರೋನನಿಗೆ, “ಯೆಹೋವನು ಆಜ್ಞಾಪಿಸಿದವುಗಳನ್ನು ಮಾಡು. ಯಜ್ಞವೇದಿಕೆಯ ಬಳಿಗೆ ಹೋಗಿ ಪಾಪಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಅರ್ಪಿಸು. ನಿನ್ನನ್ನೂ ಜನರನ್ನೂ ಶುದ್ಧಿಮಾಡುವ ಆ ಕಾರ್ಯಗಳನ್ನು ಮಾಡು. ಜನರು ತಂದದ್ದನ್ನು ತೆಗೆದುಕೊಂಡು ಅವರಿಗಾಗಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಿ ಅವರನ್ನು ಶುದ್ಧಿಮಾಡು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮೋಶೆ ಆರೋನನಿಗೆ, “ಯಜ್ಞವೇದಿಯ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಸಮರ್ಪಿಸಿ ನಿನಗೋಸ್ಕರವೂ ಮತ್ತು ನಿನ್ನ ಜನರಿಗೋಸ್ಕರವೂ ದೋಷವನ್ನು ಪರಿಹರಿಸು; ಜನರು ತಂದದ್ದನ್ನು ಸಮರ್ಪಿಸಿ ಯೆಹೋವನ ಆಜ್ಞೆಯಂತೆ ಅವರಿಗಾಗಿ ದೋಷಪರಿಹಾರವನ್ನು ಮಾಡು” ಎಂದು ಹೇಳಿದನು.
Kannada BSI Bible 2016
ಮೋಶೆಯು ಆರೋನನಿಗೆ--ಯಜ್ಞವೇದಿಯ ಹತ್ತಿರಕ್ಕೆ ಹೋಗಿ ಕರ್ತನು ಆಜ್ಞಾಪಿಸಿದಂತೆಯೇ ನಿನ್ನ ಪಾಪದಬಲಿಯನ್ನೂ ದಹನಬಲಿಯನ್ನೂ ಅರ್ಪಿಸಿ, ನಿನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು; ಜನರ ಸಮರ್ಪಣೆಗಳನ್ನು ಸಮರ್ಪಿಸಿ ಅವರಿ ಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮೋಶೆ ಆರೋನನಿಗೆ - ಯಜ್ಞವೇದಿಯ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕಯಜ್ಞವನ್ನೂ ಸರ್ವಾಂಗಹೋಮವನ್ನೂ ಸಮರ್ಪಿಸಿ ನಿನಗೋಸ್ಕರವೂ ಜನರಿಗೋಸ್ಕವೂ ದೋಷವನ್ನು ಪರಿಹರಿಸು; ಜನರು ತಂದದ್ದನ್ನು ಸಮರ್ಪಿಸಿ ಯೆಹೋವನ ಆಜ್ಞೆಯಂತೆ ಅವರಿಗೋಸ್ಕರ ದೋಷಪರಿಹಾರವನ್ನು ಮಾಡು ಎಂದು ಹೇಳಿದನು.
Kannada Bible (KNCL) BSI 2016
ಅನಂತರ ಮೋಶೆ ಆರೋನನಿಗೆ, “ಬಲಿಪೀಠದ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕ ಬಲಿಯನ್ನು ಮತ್ತು ದಹನಬಲಿಯನ್ನು ಸಮರ್ಪಿಸಿ ನಿನ್ನ ಹಾಗು ಜನರ ದೋಷವನ್ನು ಪರಿಹರಿಸು. ಜನರು ತಂದದ್ದನ್ನು ಸಮರ್ಪಿಸಿ ಸರ್ವೇಶ್ವರನ ಆಜ್ಞೆಯಂತೆ ಅವರ ದೋಷವನ್ನು ಪರಿಹರಿಸು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಆರೋನನಿಗೆ, “ಬಲಿಪೀಠದ ಕಡೆಗೆ ಹೋಗಿ, ಯೆಹೋವ ದೇವರು ಆಜ್ಞಾಪಿಸಿದಂತೆಯೇ ನಿನ್ನ ಪಾಪ ಪರಿಹಾರದ ಬಲಿಯನ್ನೂ ದಹನಬಲಿಯನ್ನೂ ಅರ್ಪಿಸು. ನಿನಗಾಗಿ ಪ್ರಾಯಶ್ಚಿತ್ತವನ್ನು ಮಾಡು, ಜನರ ಸಮರ್ಪಣೆಗಳನ್ನು ಸಮರ್ಪಿಸಿ, ಅವರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು,” ಎಂದನು.