Luke 1:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ದೇವದೂತನು ಅವನಿಗೆ, “ಜಕರೀಯನೇ, ಹೆದರಬೇಡ. ನಿನ್ನ ಪ್ರಾರ್ಥನೆ ದೇವರಿಗೆ ಕೇಳಿಸಿತು. ನಿನ್ನ ಹೆಂಡತಿಯಾದ ಎಲಿಜಬೇತಳು ಒಂದು ಗಂಡುಮಗುವನ್ನು ಹೆರುವಳು. ನೀನು ಅವನಿಗೆ ಯೋಹಾನ ಎಂದು ಹೆಸರಿಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.
Kannada BSI Bible 2016
ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆ ದೂತನು ಅವನಿಗೆ - ಜಕರೀಯಾ, ಭಯಪಬೇಡ; ನಿನ್ನ ವಿಜ್ಞಾಪನೆ ದೇವರಿಗೆ ಮುಟ್ಟಿತು; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು.
Kannada Bible (KNCL) BSI 2016
ದೂತನು ಅವನಿಗೆ, “ಜಕರೀಯಾ, ಭಯಪಡಬೇಡ! ನಿನ್ನ ಪ್ರಾರ್ಥನೆಯನ್ನು ದೇವರು ಆಲಿಸಿದ್ದಾರೆ. ನಿನ್ನ ಪತ್ನಿ ಎಲಿಜಬೇತಳಲ್ಲಿ ನಿನಗೆ ಒಂದು ಗಂಡುಮಗು ಹುಟ್ಟುವುದು. ನೀನು ಅವನಿಗೆ ‘ಯೊವಾನ್ನ’ ಎಂದು ನಾಮಕರಣ ಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದೂತನು ಅವನಿಗೆ, “ಜಕರೀಯನೇ; ಭಯಪಡಬೇಡ, ದೇವರು ನಿನ್ನ ವಿಜ್ಞಾಪನೆಯನ್ನು ಕೇಳಿದ್ದಾರೆ. ನಿನ್ನ ಹೆಂಡತಿ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು, ನೀನು ಅವನಿಗೆ, ‘ಯೋಹಾನ’ ಎಂದು ಹೆಸರನ್ನಿಡಬೇಕು.